ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಟಕ ಪ್ರದರ್ಶನಕ್ಕೆ ಅಡ್ಡಿ ಸಾಂಸ್ಕೃತಿಕ ಭಯೋತ್ಪಾದನೆ: ಸಿದ್ದರಾಮಯ್ಯ

Last Updated 4 ಜುಲೈ 2022, 19:35 IST
ಅಕ್ಷರ ಗಾತ್ರ

ಬೆಂಗಳೂರು: ‘ಶಿವಮೊಗ್ಗದ ಆನವಟ್ಟಿಯಲ್ಲಿ ‘ರಂಗಬೆಳಕು’ ತಂಡ ಪ್ರಸ್ತುತ ಪಡಿಸುತ್ತಿದ್ದ 'ಜತೆಗಿರುವನು ಚಂದಿರ' ಪ್ರದರ್ಶನಕ್ಕೆ ಆರೆಸ್ಸೆಸ್‌ ಅಡ್ಡಿಪಡಿಸಿರುವುದು ಸಾಂಸ್ಕೃತಿಕ ಭಯೋತ್ಪಾದನೆಯಲ್ಲದೆ ಮತ್ತೇನಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರ ರಾತ್ರಿ ಆಯೋಜಿಸಿದ್ದ ಈ ನಾಟಕ ಪ್ರದರ್ಶನಕ್ಕೆ ಬಜರಂಗದಳ, ಆರೆಸ್ಸೆಸ್‌ ಕಾರ್ಯಕರ್ತರು ಅಡ್ಡಿಪ‍ಡಿಸಿದ್ದರು.

ಈ ಬಗ್ಗೆ ‘ಪ್ರಜಾವಾಣಿ’ಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಟ್ಯಾಗ್ ಮಾಡಿ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ‘ಈ ಗೂಂಡಾಗಿರಿಯಲ್ಲಿ ಪಾಲುದಾರರಾದ ಎಲ್ಲಾ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಿ, ಕಾನೂನು ಕ್ರಮಕೈಗೊಳ್ಳಬೇಕು’ ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ‘ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮದ ಪರವಾಗಿರುವ ಸಾಹಿತ್ಯ,‌ ನಾಟಕ, ಕಲೆ‌ ಮೊದಲಾದ‌‌‌ ಸಾಂಸ್ಕೃತಿಕ ಅಭಿವ್ಯಕ್ತಿಗಳನ್ನು ಕಂಡರೆ ಆರೆಸ್ಸೆಸ್‌ ಮತ್ತು ಪರಿವಾರಕ್ಕೆ ಭಯ. ಈ ದಾಳಿಗೂ ಇದೇ ಕಾರಣ. ಇಂತಹ ಅಡ್ಡಿ- ಆತಂಕಗಳನ್ನು ಎದುರಿಸುವ ಚೈತನ್ಯ‌ ಕನ್ನಡದ ಸಾಂಸ್ಕೃತಿಕ‌ ಲೋಕಕ್ಕೆ ಇದೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT