ಶುಕ್ರವಾರ, ನವೆಂಬರ್ 15, 2019
22 °C

ಯಡಿಯೂರಪ್ಪ, ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಲಿ: ಸಿದ್ದರಾಮಯ್ಯ

Published:
Updated:

ಬೆಂಗಳೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಪತನವಾಗಲು ಬಿಜೆಪಿ ಕಾರಣ ಎಂಬುದು ಇದೀಗ ಸೋರಿಕೆಯಾಗಿರುವ ಅಡಿಯೊ, ವಿಡಿಯೊದಿಂದ ಬಹಿರಂಗವಾಗಿದೆ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕೇಂದ್ರ ಗೃಹ ಸಚಿವರೂ ಆಗಿರುವ ಬಿಜೆಪಿ ಅಧ್ಯಕ್ಷ ಅಮಿತ್ ಶಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. 

ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಗೆ ಈ ಸಂಬಂಧ ಅರ್ಜಿ ಸಲ್ಲಿಸಲಾಗುವುದು ಎಂದರು.

ಪ್ರಜಾಪ್ರಭುತ್ವ ಕಗ್ಗೊಲೆ ಆಗಿರುವುದಕ್ಕೆ ಬೇರೆ ಸಾಕ್ಷಿ ಬೇಡ, ಹೀಗಾಗಿ ಈ ಸರ್ಕಾರಕ್ಕೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವ ಹಕ್ಕು ಇಲ್ಲ ಎಂದರು.

ಪ್ರತಿಕ್ರಿಯಿಸಿ (+)