ಗುರುವಾರ , ಆಗಸ್ಟ್ 18, 2022
27 °C
ಸಿದ್ದರಾಮಯ್ಯ ವಿರುದ್ಧ ನಳಿನ್ ಕುಮಾರ್‌ ಕಟೀಲ್‌ ವಾಗ್ದಾಳಿ

ಸಿದ್ದರಾಮಯ್ಯನದ್ದು ರಾಮನ ಮುಖ, ರಾವಣನ ಬುದ್ಧಿ: ನಳೀನ್‌ಕುಮಾರ್ ಕಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ‘ಸಿದ್ದರಾಮಯ್ಯ ಅವರ ಮುಖ ರಾಮನದ್ದು. ಚಿಂತನೆ ಮತ್ತು ಬುದ್ದಿ ಮಾತ್ರ ರಾವಣನದ್ದು. ಹಾಗಾಗಿ ಸಿದ್ದರಾಮಯ್ಯ ಅವರು ಸಿದ್ದರಾವಣ ಎಂದು ಹೆಸರು ಬದಲಾವಣೆ ಮಾಡಿಕೊಳ್ಳಬೇಕು’ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್ ಕಟೀಲ್ ಸಲಹೆ ಮಾಡಿದ್ದಾರೆ.

ನಗರದಲ್ಲಿ ಭಾನುವಾರ ಬಿಜೆಪಿ ರೈತ ಮೋರ್ಚಾ ರಾಜ್ಯ ಘಟಕದಿಂದ ಹಮ್ಮಿಕೊಂಡಿದ್ದ ರಾಜ್ಯ ಕಾರ್ಯಕಾರಿಣಿಯಲ್ಲಿ ಅವರು ಮಾತನಾಡಿದರು.  

‘ಜಿ.ಪರಮೇಶ್ವರ ಅವರನ್ನು ಮುಖ್ಯಮಂತ್ರಿಯಾಗಲು ಬಿಡಲಿಲ್ಲ. ಈಗ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸುವ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ಕುರ್ಚಿಯ ಮೇಲೆ ಟವೆಲ್ ಹಾಕಿದ್ದಾರೆ. ಆದರೆ, ಅವರು ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ' ಎಂದು ಭವಿಷ್ಯ ನುಡಿದರು. 

‘ಖರ್ಗೆ, ಪರಮೇಶ್ವರ ಅವರನ್ನು ರಾಜಕೀಯವಾಗಿ ಮುಗಿಸಿ ಪರಿಶಿಷ್ಟ ರಿಗೆ ಅನ್ಯಾಯ ಮಾಡಿದರು. ರಾಜ ಕೀಯವಾಗಿ ಬೆಳೆಸಿದ ದೇವೇಗೌಡರನ್ನು ತುಳಿಯುವ ಕೆಲಸ ಮಾಡಿದರು. ಅವರಿಂದಾಗಿ ರಾಜ್ಯ ಈಗ ಕಾಂಗ್ರೆಸ್ ಮುಕ್ತ ಕರ್ನಾಟಕವಾಗಿದೆ. ಅವರಿಗೆ ಧನ್ಯವಾದಗಳು’ ಎಂದರು.

ಸಮಾಜವಾದದ ಹೆಸರಲ್ಲಿ ರಾಜಕೀಯಕ್ಕೆ ಬಂದು, ಜಾತಿ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ.  ಸಿದ್ದರಾಮಯ್ಯಗೆ ಕುರುಬ ಸಮುದಾಯದ ಬಗ್ಗೆ ಕಾಳಜಿಯಿಲ್ಲ.
ಅಲ್ಪಸಂಖ್ಯಾತರ ಮತಬ್ಯಾಂಕ್‌ಗಾಗಿ ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಮರು ಹೊಡೆದಾಡುವಹಾಗೆ ಮಾಡಿದರು
ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು