ಬೆಂಗಳೂರು: ‘ಕಾಗಿನೆಲೆ ಪೀಠದ ಇತಿಹಾಸವನ್ನು ತಿರುಚುವುದು, ಸ್ವಾಮೀಜಿಗೆ ಬೆದರಿಕೆ ಹಾಕುವುದೆಲ್ಲ ನಡೆಯುವುದಿಲ್ಲ. ಎಲ್ಲ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ಸ್ಥಾಪಿಸಿದ್ದು ನಾನು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇಲ್ಲಿನ ಗಾಂಧಿನಗರದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ, ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ವಿದ್ಯಾರ್ಥಿನಿಲಯದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

‘ನನ್ನ ಹಳೆಯ ಕಾರಿನಲ್ಲಿ ಇಡೀ ರಾಜ್ಯ ಸುತ್ತಿ ಸಮಾಜವನ್ನು ಸಂಘಟಿಸಿದ್ದೆ. ತಾರಾಕಾನಂದರನ್ನು ಪೀಠಾಧ್ಯಕ್ಷರನ್ನಾಗಿ ಮಾಡಲು ತೀರ್ಮಾನಿಸಿದ್ದೆ. ಈಗ ವಿಶ್ವನಾಥ್(ವಿಧಾನಪರಿಷತ್ತಿನ ಬಿಜೆಪಿ ಸದಸ್ಯ) ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರೇ ಪೀಠವನ್ನು ಸ್ಥಾಪಿಸಿದ್ದಾಗಿ ಹೇಳಿ ಸ್ವಾಮೀಜಿಯನ್ನು ಬೆದರಿಸುತ್ತಿದ್ದಾರೆ’ ಎಂದರು.

‘ರೌಡಿ ಕೊತ್ವಾಲ್ ರಾಮಚಂದ್ರನ ಜೊತೆ ಇದ್ದ ಪುಟ್ಟಸ್ವಾಮಿ ಹಿಂದೆ ಕುರುಬರ ಸಂಘದ ವಿಚಾರದಲ್ಲಿ ಭಾಗಿ ಆಗದಂತೆ ನನಗೆ ಬೆದರಿಕೆ ಹಾಕಿದ್ದರು. ಇದಕ್ಕೆಲ್ಲ ಬಗ್ಗದೇ ಸಂಘದ ಅಧ್ಯಕ್ಷ ಸ್ಥಾನಕ್ಕೆ ರೌಡಿ ಪುಟ್ಟಸ್ವಾಮಿ ವಿರುದ್ಧ ದಾವಣಗೆರೆಯ ಮಲ್ಲಪ್ಪ ಅವರನ್ನು ನಿಲ್ಲಿಸಿ ಸಂಘವನ್ನು ಉಳಿಸಿದ್ದೆ’ ಎಂದು ವಿವರಿಸಿದರು.

‘ಆಗಿನ ಮುಖ್ಯಮಂತ್ರಿ ಬಂಗಾರಪ್ಪ ಮತ್ತು ಕೇಂದ್ರ ಸಚಿವ ಶರದ್ ಪವಾರ್ ಅವರನ್ನು ಕರೆಸಿ ಪೀಠಕ್ಕೆ ಚಾಲನೆ ನೀಡಲಾಯಿತು. ಕುರುಬ ಸಮಾಜಕ್ಕೆ ಆಸ್ತಿ ಉಳಿಸಿ, ಬೆಳೆಸುವ, ಸಂಘಟನೆ ಮಾಡುವ ಕಾರ್ಯದಲ್ಲಿ ಮುಕುಡಪ್ಪ, ಶಿವಣ್ಣ, ಮಾಸ್ತಿ, ಸಿದ್ದಲಿಂಗಯ್ಯ, ನಾಗಣ್ಣ ಸಹಿತ ಅನೇಕರು ಜೊತೆಗೆ ನಿಂತು ಸಹಕಾರ ನೀಡಿದ್ದರು. ಆಮೇಲೆ ವಿಶ್ವನಾಥ್ ಅವರನ್ನು ಪೀಠದ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ್ದೆ’ ಎಂದರು.

‘ನಾನು ರಾಜಕಾರಣಕ್ಕೆ ಬಾರದೇ ಹೋಗಿದ್ದರೆ ಕುರುಬ ಸಂಘದ ಕಟ್ಟಡವೂ ಉಳಿಯುತ್ತಿರಲಿಲ್ಲ, ಕಾಗಿನೆಲೆ ಪೀಠವೂ ಆಗುತ್ತಿರಲಿಲ್ಲ. ರಿಯಲ್ ಎಸ್ಟೇಟ್ ರೌಡಿಗಳಿಂದ ಬೈರಪ್ಪನ ಗುಡಿ ಮತ್ತು ಸಮಾಜದ ಭೂಮಿ, ಕಟ್ಟಡಗಳನ್ನು ಉಳಿಸಲು ಸಾಧ್ಯವಾಗುತ್ತಿರಲಿಲ್ಲ’ ಎಂದು ವಿವರಿಸಿದರು.

ಎಲ್ಲಾ . ನಾನು ಮೊದಲಿಂದಲೂ ಸನಾತನವಾದಿ RSS ಗೆ ವಿರುದ್ಧ, ಜಾತಿ ವ್ಯವಸ್ಥೆ ಮತ್ತು ಮೌಡ್ಯಕ್ಕೆ ವಿರುದ್ಧ ಇದ್ದೇನೆ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ತಿಳಿಸಿದರು.

‘ಆರ್ಎಸ್ಎಸ್ ವಿರೋಧದ ಕಾರಣಕ್ಕೆ ಕಾಗಿನೆಲೆ ಪೀಠ ಸ್ಥಾಪನೆ’

‘ಸಮಾಜವನ್ನು ಒಡೆದು ಜಾತಿ ವ್ಯವಸ್ಥೆ ರೂಪಿಸಿದ ಸಿದ್ಧಾಂತ ಆರ್ಎಸ್ಎಸ್ನದ್ದು. ಆ ಸಿದ್ಧಾಂತ ಶ್ರಮಿಕ ಜಾತಿ ವರ್ಗಗಳ ವಿರೋಧಿ. ಅದಕ್ಕೇ ನಾನು ಸನಾತನವಾದಿ ಸಂಘಟನೆ ಆರ್ಎಸ್ಎಸ್ ಅನ್ನು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದೇನೆ. ಅದೇ ಕಾರಣಕ್ಕೆ ಎಲ್ಲ ಶೋಷಿತ ಸಮುದಾಯಗಳ ಧ್ವನಿಯಾಗಿ ಕಾಗಿನೆಲೆ ಪೀಠವನ್ನು ನಾನು ಸ್ಥಾಪಿಸಿದೆ’ ಎಂದು ಸಿದ್ದರಾಮಯ್ಯ ಹೇಳಿದರು. ‘ಸಂಘದ ಕಟ್ಟಡದಲ್ಲಿ ಕುರುಬ ಸಮಾಜದ ಮಕ್ಕಳಿಗೆ ಶಿಕ್ಷಣ ಹಾಸ್ಟೆಲ್ ಬೇಕು ಎನ್ನುವುದು ನನ್ನ ಸ್ಪಷ್ಟ ಉದ್ದೇಶವಾಗಿತ್ತು. ನಾನು ಸಾರಿಗೆ ಮಂತ್ರಿ ಆಗಿದ್ದಾಗ 1988ರಲ್ಲೇ ಕನಕದಾಸರ 500ನೇ ಜಯಂತಿ ಆಚರಣೆ ಮಾಡಿಸಿದ್ದೆ. ಅದೇ ಸಂದರ್ಭದಲ್ಲಿ ಸಮಾಜಕ್ಕೊಂದು ಗುರುಪೀಠ ಬೇಕು ಎಂದು ತೀರ್ಮಾನಿಸಿದ್ದೆ. ಆಗ ಸಂಘದ ಕಟ್ಟಡದ ಮೇಲೆ ₹ 3 ಕೋಟಿ ಸಾಲ ಇತ್ತು. ಆ ಸಾಲದ ಸುಳಿಯಿಂದ ಸಂಘವನ್ನು ಬಿಡಿಸಲಾಯಿತು’ ಎಂದು ಹೇಳಿದರು. ‘ಮೈಸೂರು ಹುಬ್ಬಳ್ಳಿ ಶಿವಮೊಗ್ಗ ದಾವಣಗೆರೆ ಸೇರಿ ರಾಜ್ಯದ ಹತ್ತು ಹಲವು ಕಡೆಗಳಲ್ಲಿ ಸಂಘಕ್ಕೆ ಜಾಗ-ಕಟ್ಟಡ ಉಳಿಸಿಕೊಟ್ಟಿದ್ದೇನೆ. ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಸಂಗೊಳ್ಳಿ ಅಭಿವೃದ್ಧಿ ಪ್ರಾಧಿಕಾರ ಮಾಡಿದ್ದೆ. ಮುಕುಡಪ್ಪ ಸಹಿತ ಅನೇಕರು ಆಗ ಸಹಕರಿಸಿದ್ದರು. ಈಗ 600 ಕುರುಬ ಸಮುದಾಯ ಭವನಗಳನ್ನು ಮಾಡಲು ಸರ್ಕಾರ ಮುಂದಾಗಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.