ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣವನ್ನು ಬಗ್ಗೆ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ. 7 ಟ್ವೀಟ್‌ಗಳ ಥ್ರೆಡ್ ಪೋಸ್ಟ್ ಮಾಡಿರುವ ಅವರು, 'ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣಗಳು ಜನರಲ್ಲಿ ಆತ್ಮವಿಶ್ವಾಸ ತುಂಬಲು ವಿಫಲವಾಗಿದೆ' ಎಂದು ಆಕ್ಷೇಪಿಸಿದ್ದಾರೆ.

'ಬಾಯಿಬಿಟ್ಟರೆ ಬಣ್ಣಗೇಡು ಎಂಬಂತಿವೆ ಪ್ರಧಾನಿಯಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ ತತ್ತರಕ್ಕೀಡಾಗಿರುವ ಜನರಲ್ಲಿ ಆತ್ಮವಿಶ್ವಾಸ ತುಂಬುವ ಯಾವುದೇನಿರ್ದಿಷ್ಟಯೋಜನೆಗಳ ಪ್ರಸ್ತಾವಗಳೇ ಇಲ್ಲದ ಪ್ರಧಾನಿ ಭಾಷಣ ಕೈಲಾಗದ ನಾಯಕನ ಗೋಳಾಟದಂತಿತ್ತು' ಎಂದು ವಿಶ್ಲೇಷಿಸಿದ್ದಾರೆ.

ಇದನ್ನೂ ಓದಿ:ನವೆಂಬರ್‌ವರೆಗೆ 80 ಕೋಟಿ ಜನರಿಗೆ ಉಚಿತ ಅಕ್ಕಿ-ಬೇಳೆ: ಪ್ರಧಾನಿ ಮೋದಿ ಘೋಷಣೆ

'ಬಡವರಿಗೆ ಉಚಿತ ಆಹಾರ ಧಾನ್ಯ ನೀಡುವ ಗರೀಬ್ ಕಲ್ಯಾಣ ಯೋಜನೆ ನವೆಂಬರ್‌ವರೆಗೆ ಮುಂದುವರಿಸಿರುವುದು ಸ್ವಾಗತಾರ್ಹ. ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಸೋನಿಯಾಗಾಂಧಿಯವರು ತಿಂಗಳ ಹಿಂದೆಯೇ ಈ ಬೇಡಿಕೆ ಇಟ್ಟಿದ್ದರು. ಅದನ್ನು ಒಪ್ಪಿಕೊಂಡದ್ದಕ್ಕೆ ಧನ್ಯವಾದಗಳು' ಎಂದು ಅಭಿನಂದಿಸಿದ್ದಾರೆ.

'ಕೊರೊನಾ ಸೋಂಕಿನ ತೀವ್ರತೆ ನೋಡಿದರೆ ಇದು 2-3 ತಿಂಗಳೊಳಗೆ ಕೊನೆಗೊಳ್ಳುವಂತಹದ್ದಲ್ಲ. ದೇಶದಲ್ಲಿ ಹಸಿವಿನ ಸಮಸ್ಯೆ ಇನ್ನಷ್ಟು ಭೀಕರವಾಗಲಿದೆ. ಆದ್ದರಿಂದ ನಾವು ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಯನ್ನು ಇಡೀ ದೇಶದಲ್ಲಿ ಜಾರಿಗೆ ತರಬೇಕೆಂದು ಪ್ರಧಾನಿಯನ್ನು ಒತ್ತಾಯಿಸುತ್ತೇನೆ' ಎಂದು ಹೇಳಿದ್ದಾರೆ.

'ಆಸ್ಪತ್ರೆಗಳು ತುಂಬಿಹೋಗಿವೆ, ಆಮ್ಲಜನಕ ಪೂರೈಕೆ ವ್ಯವಸ್ಥೆ, ವೆಂಟಿಲೇಟರ್‌ಗಳ ತೀವ್ರ ಕೊರತೆ ಇದೆ. ದುಬಾರಿ ಚಿಕಿತ್ಸೆ ವೆಚ್ಚದಿಂದಾಗಿ
ಕೊರೊನಾ ಸೋಂಕಿಗಿಂತ ಕೊರೊನಾ ಚಿಕಿತ್ಸೆಗೆ ಜನ ಹೆದರುವಂತಾಗಿದೆ. ಈ ಬಗ್ಗೆ ರಾಜ್ಯಗಳಿಗೆ ಕೇಂದ್ರ ನೆರವು ಘೋಷಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಪಿಎಂ ಕೇರ್ಸ್ ನಿಧಿಯ ಖರ್ಚು-ವೆಚ್ಚದ ವಿವರವನ್ನು ದೇಶದ ಮುಂದಿಟ್ಟು ಪಾರದರ್ಶಕವಾಗಿ ನಡೆದುಕೊಳ್ಳಬಹುದೆಂಬ ನಿರೀಕ್ಷೆಯೂ ಹುಸಿಯಾಗಿದೆ. ಇದಕ್ಕೆ ಚೀನಾದಿಂದಲೂ ದೇಣಿಗೆ ಪಡೆಯಲಾಗಿದೆ ಎಂಬ ಆರೋಪಗಳಿವೆ.
ಈ ಬಗ್ಗೆ ಸ್ಪಷ್ಟೀಕರಣ ನೀಡಬೇಕಿತ್ತು' ಎಂದು ಅಭಿಪ್ರಾಯಪಟ್ಟಿದ್ದಾರೆ.

'ವೀರಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಘೋಷಿಸಿದ್ದ ಪ್ರಧಾನಿ ಅದಕ್ಕಾಗಿ ಏನು ಮಾಡಿದ್ದೇವೆ ಎಂಬುದನ್ನು ತಿಳಿಸಬೇಕಿತ್ತು' ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.