ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸಮಾನತೆ, ಜಾತಿ ವ್ಯವಸ್ಥೆ ಅಳಿಸಿ: ಸಿದ್ದರಾಮಯ್ಯ

ಯುಪಿಎಸ್‌ಸಿ- 2022 ಸಾಧಕರಿಗೆ ಸನ್ಮಾನ ಸಮಾರಂಭ
Published 10 ಜೂನ್ 2023, 5:54 IST
Last Updated 10 ಜೂನ್ 2023, 5:54 IST
ಅಕ್ಷರ ಗಾತ್ರ

ಬೆಂಗಳೂರು: ‘ಜಾತಿ ತಾರತಮ್ಯದಿಂದಾಗಿ ಹಲವರು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ನಾಗರಿಕ ಸೇವೆಗೆ ಸೇರ್ಪಡೆಯಾಗುತ್ತಿರುವ ಅಭ್ಯರ್ಥಿಗಳು, ಸಮಾಜದಲ್ಲಿರುವ ಅಸಮಾನತೆ ಹಾಗೂ ಜಾತಿ ವ್ಯವಸ್ಥೆಯನ್ನು ಅಳಿಸಿ ಗುಣಮಟ್ಟದ ಶಿಕ್ಷಣದ ಜೊತೆ ಎಲ್ಲರಿಗೂ ಬದುಕಿನ ಅವಕಾಶಗಳನ್ನು ದೊರಕಿಸಬೇಕು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಡಾ. ರಾಜ್‌ಕುಮಾರ್ ಅಕಾಡೆಮಿ ವತಿಯಿಂದ ನಗರದ ಜ್ಞಾನಜ್ಯೋತಿ ಸಭಾಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಯುಪಿಎಸ್‌ಸಿ-2022 ಸಾಧಕರಿಗೆ ಸನ್ಮಾನ’ ಸಮಾರಂಭದಲ್ಲಿ ಸಾಧಕರನ್ನು ಅಭಿನಂದಿಸಿ ಅವರು ಮಾತನಾಡಿದರು.

‘ನಾನು ಮುಖ್ಯಮಂತ್ರಿ ಆಗುವುದಕ್ಕೆ ಈ ಸಮಾಜದ ಕೊಡುಗೆ ಅಪಾರವಿದೆ. ಯುಪಿಎಸ್‌ಸಿ ಪರೀಕ್ಷೆ ಪಾಸಾಗಿರುವ ಅಭ್ಯರ್ಥಿಗಳು, ದೇಶ ಮತ್ತು ಸಮಾಜದ ಪ್ರಗತಿಗೆ ಶ್ರಮಿಸಬೇಕು’ ಎಂದರು.

‘ಸರಳ ವ್ಯಕ್ತಿತ್ವ ಹಾಗೂ ಸಂಸ್ಕಾರದ ರಾಯಭಾರಿ ಡಾ. ರಾಜ್‌ಕುಮಾರ್. ಅವರ ಬದುಕಿನಿಂದ ನಾವೆಲ್ಲರೂ ಕಲಿಯಬೇಕಾಗಿರುವುದು ಹಾಗೂ ರೂಢಿಸಿಕೊಳ್ಳುವುದು ಬಹಳ ಇದೆ’ ಎಂದು ಹೇಳಿದರು.

ಮಾಜಿ ರಕ್ಷಣಾ ಕಾರ್ಯದರ್ಶಿ ಡಾ. ಶ್ರೀನಿವಾಸನ್, ಭಾರತೀಯ ಸೇನೆಯ ಮಾಜಿ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ರಮೇಶ್ ಹಲಗಲಿ, ಮಾಜಿ ಪ್ರಧಾನ ಮುಖ್ಯ ಆಯುಕ್ತ ಕೆ. ಸತ್ಯನಾರಾಯಣ, ಕೃಷಿ ವಿಶ್ವವಿದ್ಯಾನಿಲಯದ ಮಾಜಿ ಕುಲಪತಿ ಕೆ. ನಾರಾಯಣಗೌಡ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ನಟ ರಾಘವೇಂದ್ರ ರಾಜ್ ಕುಮಾರ್, ಅಶ್ವಿನಿ ಪುನೀತ್‌ ರಾಜ್‌ಕುಮಾರ್ ಸಮಾರಂಭದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT