ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜೀನಾಮೆ ನೀಡಿ ಸಿದ್ದರಾಮಯ್ಯ ತನಿಖೆ ಎದುರಿಸಲಿ: ಜೆಡಿಎಸ್‌

ಜೆಡಿಎಸ್‌ ಬೆಂಗಳೂರು ನಗರ ಜಿಲ್ಲಾ ಘಟಕ ಆಗ್ರಹ
Published : 25 ಸೆಪ್ಟೆಂಬರ್ 2024, 16:09 IST
Last Updated : 25 ಸೆಪ್ಟೆಂಬರ್ 2024, 16:09 IST
ಫಾಲೋ ಮಾಡಿ
Comments

ಬೆಂಗಳೂರು: ‘ಮುಡಾ ಹಗರಣದ ತನಿಖೆಗೆ ಹೈಕೋರ್ಟ್‌ ಅವಕಾಶ ನೀಡಿರುವುದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು’ ಎಂದು ಆಗ್ರಹಿಸಿ ಜೆಡಿಎಸ್‌ ಬೆಂಗಳೂರು ನಗರ ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.

ವಿಧಾನ ಪರಿಷತ್‌ ಸದಸ್ಯ ಕೆ.ಎ. ತಿಪ್ಪೇಸ್ವಾಮಿ ಮಾತನಾಡಿ, ‘ಬಾಟ್ಲಿಂಗ್‌ ಹಗರಣದ ಆರೋಪ ಬಂದಾಗ ರಾಮಕೃಷ್ಣ ಹೆಗಡೆ ರಾಜೀನಾಮೆ ನೀಡಿದ್ದರು. ಡಿನೋಟಿಫಿಕೇಶನ್‌ ಆರೋಪ ಬಂದಾಗ ಬಿ.ಎಸ್‌. ಯಡಿಯೂರಪ್ಪ ರಾಜೀನಾಮೆ ನೀಡಿದ್ದರು. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಕೈವಾಡ ಇರುವುದರಿಂದ ಅವರು ರಾಜೀನಾಮೆ ನೀಡಬೇಕು’ ಎಂದು ಒತ್ತಾಯಿಸಿದರು.

ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಮಾತನಾಡಿ, ‘ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅವಕಾಶ ನೀಡಿರುವ ರಾಜ್ಯಪಾಲರ ನಿರ್ಧಾರವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಸಿದ್ದರಾಮಯ್ಯ ತನ್ನ ಪ್ರಭಾವವನ್ನು ದುರ್ಬಳಕೆ ಮಾಡಿಕೊಂಡು ಕುಟುಂಬಕ್ಕೆ ನೆರವಾಗಿರುವುದು ಸ್ಪಷ್ಟವಾಗಿದೆ’ ಎಂದು ಹೇಳಿದರು.

ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ಎಂ. ರಮೇಶ್‌ ಗೌಡ, ‘ಬೇರೆಯವರ ನೈತಿಕತೆಯನ್ನು ಪ್ರಶ್ನಿಸುವ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ಕೂಡಲೇ ರಾಜೀನಾಮೆ ನೀಡಿ ತನಿಖೆಯನ್ನು ಎದುರಿಸಬೇಕು’ ಎಂದು ಆಗ್ರಹಿಸಿದರು.

ಜೆಡಿಎಸ್‌ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ರಮೇಶ್‌, ದಕ್ಷಿಣ ಕ್ಷೇತ್ರ ಅಧ್ಯಕ್ಷ ತುಳಸಿರಾಂ, ರಾಜಾಜಿನಗರ ಕ್ಷೇತ್ರ ಅಧ್ಯಕ್ಷ ಶಶಿಕುಮಾರ್‌ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT