ಬೆಂಗಳೂರು: ‘ಐದು ವರ್ಷಗಳ ಕಾಲ ಸಿದ್ದರಾಮಯ್ಯ ನೇತೃತ್ವದಲ್ಲೇ ಸರ್ಕಾರ ಕೆಲಸ ಮಾಡಲಿದೆ. ಇನ್ನೂ ನಾಲ್ಕು ವರ್ಷ ಹತ್ತು ತಿಂಗಳ ಕಾಲ ರಾಜ್ಯದಲ್ಲಿ ನಮ್ಮ ಸರ್ಕಾರ ಅಭಿವೃದ್ಧಿ ಕೆಲಸ ಮಾಡಲಿದೆ’ ಎಂದು ಕಾಂಗ್ರೆಸ್‌ನ ಬಸವರಾಜ ರಾಯರಡ್ಡಿ ವಿಧಾನಸಭೆಯಲ್ಲಿ ಬುಧವಾರ ಹೇಳಿದರು.
ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಸಂಪೂರ್ಣ ಬಹುಮತದೊಂದಿಗೆ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ಈ ಸರ್ಕಾರ ಮೂರು ತಿಂಗಳಿಗೆ, ಆರು ತಿಂಗಳಿಗೆ ಪತನವಾಗುತ್ತಿದೆ ಎಂದು ನೀವು ಹೇಳುತ್ತಿದ್ದೀರಿ. ಅಂತಹ ಯಾವುದೂ ನಡೆಯುವುದಿಲ್ಲ. ಆಗ ಕೆಲವರು ಪಕ್ಷದಿಂದ ಹೊರ ಹೋಗಿರಬಹುದು. ಈಗ ಯಾರೂ ಅಂತಹವರಿಲ್ಲ. ಐದು ವರ್ಷವೂ ಸಿದ್ದರಾಮಯ್ಯ ನೇತೃತ್ವದಲ್ಲೇ ಸರ್ಕಾರ ಇರುತ್ತದೆ’ ಎಂದರು.
‘ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ’ ಎಂದು ವಿರೋಧ ಪಕ್ಷಗಳ ಸದಸ್ಯರು ಜೋರಾಗಿ ಕೂಗಿದರು. ಅದಕ್ಕೆ ಪ್ರತಿಕ್ರಿಯಿಸಿದ ರಾಯರಡ್ಡಿ, ‘ಶಿವಕುಮಾರ್ ಅವರನ್ನು ಪಕ್ಷವು ಮುಖ್ಯಮಂತ್ರಿ ಮಾಡಿದರೆ ನಮ್ಮ ಅಭ್ಯಂತರವೇನೂ ಇಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.