ಗುರುವಾರ , ಆಗಸ್ಟ್ 13, 2020
21 °C

ಕಾನ್‌ಸ್ಟೆಬಲ್ ನೇಮಕಾತಿ ವಯೋಮಿತಿ ಹೆಚ್ಚಳ; ಗೃಹ ಸಚಿವರಿಗೆ ಸಿದ್ದರಾಮಯ್ಯ ಪತ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸ್ ಕಾನ್‌ಸ್ಟೆಬಲ್ ನೇಮಕಾತಿ ವಯೋಮಿತಿ ಹೆಚ್ಚಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.

‘ಕಾನ್‌ಸ್ಟೆಬಲ್ ನೇಮಕಾತಿ ವಯೋಮಿತಿಯನ್ನು ಕನಿಷ್ಠ 19 ವರ್ಷ ಮತ್ತು ಗರಿಷ್ಠ 25 ವರ್ಷ (ಎಸ್ಸಿ, ಎಸ್ಟಿಗೆ 27) ನಿಗದಿ ಮಾಡಲಾಗಿದೆ. ಹೊರ ರಾಜ್ಯದಲ್ಲಿ ಹೆಚ್ಚಳ ಮಾಡಿರುವ ರೀತಿಯಲ್ಲೇ ನಮ್ಮ ರಾಜ್ಯದಲ್ಲೂ ಕಾನ್‌ಸ್ಟೆಬಲ್ ನೇಮಕಾತಿ ವಯೋಮಿತಿಯನ್ನು ಹೆಚ್ಚಿಸಬೇಕು’ ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಸ್ಪರ್ಧಾತ್ಮಕ ಪರೀಕ್ಷಾ ವಿದ್ಯಾರ್ಥಿಗಳ ಒಕ್ಕೂಟವು ಗೃಹ ಸಚಿವರಿಗೆ ಈಗಾಗಲೇ ಮನವಿ ಸಲ್ಲಿಸಿದೆ.

ಇದೇ ಮನವಿಯನ್ನು ಉಲ್ಲೇಖಿಸಿ ಶುಕ್ರವಾರ ಪತ್ರ ಬರೆದಿರುವ ಸಿದ್ದರಾಮಯ್ಯ, ‘ಒಕ್ಕೂಟದ ಅಧ್ಯಕ್ಷರು ಸಲ್ಲಿಸಿರುವ ಮನವಿಯನ್ನು ಪರಿಶೀಲಿಸಿ’ ಎಂದು ಗೃಹಸಚಿವರನ್ನು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು