ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ತಿಂಗಳಾದರೂ ನೇಕಾರರಿಗೆ ತಲುಪದ ಪರಿಹಾರ: ಸಿದ್ದರಾಮಯ್ಯ

Last Updated 25 ಜೂನ್ 2020, 21:39 IST
ಅಕ್ಷರ ಗಾತ್ರ

ಬೆಂಗಳೂರು: ‘ನೇಕಾರರಿಗೆ ಘೋಷಿ ಸಿರುವ ಪರಿಹಾರ ಪ್ಯಾಕೇಜ್‍ಅನ್ನು ರಾಜ್ಯ ಸರ್ಕಾರ ತಕ್ಷಣ ಬಿಡುಗಡೆ ಮಾಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

‘ನೇಕಾರರ ಕುಟುಂಬಗಳಿಗೆ ತಲಾ ₹ 2,000 ಪರಿಹಾರ ಘೋಷಿಸಿ ಎರಡು ತಿಂಗಳು ಕಳೆದರೂ ಒಂದೇ ಒಂದು ರೂಪಾಯಿ ತಲುಪಿಲ್ಲ’ ಎಂದು ಹೇಳಿದ್ದಾರೆ.

‘ಕೃಷಿ ಕ್ಷೇತ್ರದಲ್ಲಿ ಅನುಸರಿಸಲಾಗುತ್ತಿರುವ ಆವರ್ತ ನಿಧಿ ಪದ್ಧತಿಯನ್ನು ನೇಕಾರಿಕೆಗೂ ಅಳವಡಿಸಿ ಬಿಕ್ಕಟ್ಟು ಬಂದಾಗ ಬಳಸಲು ಕ್ರಮವಹಿಸಬೇಕು’ ಎಂದೂ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

‘ಎಲ್ಲ ನೇಕಾರರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ನೇಕಾರ ಕುಟುಂಬಕ್ಕೆ ಕನಿಷ್ಠ ₹ 10 ಸಾವಿರ ತುರ್ತಾಗಿ ನೀಡಬೇಕು ಮತ್ತು ಕೊರೊನಾ ಬಗೆಹರಿಯುವವರೆಗೆ ಆಹಾರಧಾನ್ಯಗಳ ಕಿಟ್‍ ನೀಡಬೇಕು. ನೇಕಾರರ ಉತ್ಪನ್ನಗಳನ್ನು ಆಧರಿಸಿ ಸಾಲ ಸೌಲಭ್ಯ ಕಲ್ಪಿಸಬೇಕು. ವಿದ್ಯುತ್ ಶುಲ್ಕ ಮನ್ನಾ ಮಾಡಬೇಕು. ನೇಕಾರರಿಗೆ ಸಹಕಾರಿ ಮತ್ತು ಇತರ ಬ್ಯಾಂಕುಗಳಲ್ಲಿ ಸುಲಭವಾಗಿ ಸಾಲ ಸಿಗುವಂತೆ ಮಾಡಬೇಕು’ ಎಂದೂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT