ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧಾರೂಢ ಮಿಷನ್‌ನ 25ನೇ ವರ್ಷದ ಸಂಭ್ರಮ 10ರಿಂದ

Published 8 ಮೇ 2024, 15:38 IST
Last Updated 8 ಮೇ 2024, 15:38 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಮೋಹಳ್ಳಿಯ ಸಿದ್ಧಾರೂಢ ಮಿಷನ್ ಆಶ್ರಮದ 25ನೇ ವರ್ಷದ ಸಂಭ್ರಮದ ಅಂಗವಾಗಿ ಇದೇ 10ರಿಂದ 12ರವರೆಗೆ ನಡೆಯುವ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ’ ಎಂದು ಆಶ್ರಮದ ಅಧ್ಯಕ್ಷ ಆರೂಢಭಾರತೀ ಸ್ವಾಮೀಜಿ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕೆಂಗೇರಿ ಹೋಬಳಿ ರಾಮೋಹಳ್ಳಿಯ ಸಿದ್ದಾರೂಢ ಆಶ್ರಮದಲ್ಲಿ ಮೂರು ದಿನಗಳು ನಡೆಯುವ ಕಾರ್ಯಕ್ರಮದಲ್ಲಿ 108 ಮಠಾಧೀಶರ ಸಮಾವೇಶ, ಜ್ಞಾನಯಜ್ಞ–ಜಪಯಜ್ಞ, ಭಜನಾ ಸಮ್ಮೇಳನ, ಪುಸ್ತಕ ಬಿಡುಗಡೆ, ಆರೂಢಶ್ರೀ ಪ್ರಶಸ್ತಿ ಪ್ರದಾನ ನಡೆಯಲಿದೆ’ ಎಂದು ತಿಳಿಸಿದರು.

ಮೇ 10ರಂದು ಬೆಳಿಗ್ಗೆ 6.45ಕ್ಕೆ ಹರಳಕಟ್ಟೆಯ ಶಿವಾನಂದ ಮಠದ ನಿಜಗುಣ ಸ್ವಾಮೀಜಿ ಅವರು ಪ್ರಣವ ಧ್ವಜಾರೋಹಣ ಮಾಡಲಿದ್ದಾರೆ. ಭಜನಾ ಸಮ್ಮೇಳನ, ಜಪಯಜ್ಞ, ಭಗವದ್ಗೀತೆ ವಚನ ಸಿದ್ಧಾರೂಢ ಕಥಾಮೃತಗಳ ಪಾರಾಯಣ ನಡೆಯಲಿದೆ. ಬೆಳಿಗ್ಗೆ 10.30ಕ್ಕೆ ಬಸವ ಜಯಂತಿ, ಸಿದ್ಧಸೂಕ್ತಿ–3 ಪುಸ್ತಕದ ಬಿಡುಗಡೆ ನಡೆಯಲಿದೆ ಎಂದು ಹೇಳಿದರು. 

‘ಮೇ 11ರಂದು ಬೆಳಿಗ್ಗೆ 11.15ಕ್ಕೆ ಸಾಂಸ್ಕೃತಿಕ ಭವನದ ಉದ್ಘಾಟನೆ ಹಾಗೂ ‘ಆರೂಢ ಶ್ರೀ’ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಸುತ್ತೂರು ವೀರ ಸಿಂಹಾಸನ ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ತುಮಕೂರಿನ ಸಿದ್ದಗಂಗಾ ಮಠದ ಸಿದ್ಧಲಿಂಗ ಸ್ವಾಮಿಜಿ, ಧರ್ಮಸ್ಥಳದ ಧರ್ಮಾಧಿಕಾರಿಗಳು ವೀರೇಂದ್ರ ಹೆಗ್ಗಡೆ, ಆದಿಚುಂಚನಗಿರಿ ಮಠದ ಸೌಮ್ಯನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ’ ಎಂದರು

‘ಮೇ 12ರಂದು ಶಂಕರ ಜಯಂತಿ ಹಾಗೂ ಗುರುನಾಥ ರೂಢರ ಪುಣ್ಯಾರಾಧನೆ ಕಾರ್ಯಕ್ರಮದಲ್ಲಿ ಸಾವಯವ ಕೃಷಿ ಕುರಿತ ಚಿಂತನೆ ನಡೆಯಲಿದ್ದು, ಇದರಲ್ಲಿ 108 ಮಠಾಧೀಶರು ಭಾಗವಹಿಸಲಿದ್ದಾರೆ’ ಎಂದು ತಿಳಿಸಿದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT