ಸೋಮವಾರ, 17 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಎಂಟಿಸಿಗೆ ‘ಹೆಲ್ತ್‌ ವರ್ಕ್‌ಪ್ಲೇಸ್‌–2024’ ಬೆಳ್ಳಿ ಪ್ರಶಸ್ತಿ

Published 24 ಮೇ 2024, 16:28 IST
Last Updated 24 ಮೇ 2024, 16:28 IST
ಅಕ್ಷರ ಗಾತ್ರ

ಬೆಂಗಳೂರು: ಕೆಲಸದ ಸ್ಥಳಗಳಲ್ಲಿ ಸಿಬ್ಬಂದಿಯ ಆರೋಗ್ಯ, ಯೋಗಕ್ಷೇಮಕ್ಕೆ ಆದ್ಯತೆ ನೀಡಿ ಕಾರ್ಯಕ್ರಮ ರೂಪಿಸಿದ್ದಕ್ಕಾಗಿ ಆರೋಗ್ಯ ವರ್ಲ್ಡ್‌ ಸಂಸ್ಥೆ ನೀಡುವ ‘ಹೆಲ್ತ್‌ ವರ್ಕ್‌ಪ್ಲೇಸ್‌–2024’ ಬೆಳ್ಳಿ ಪ್ರಶಸ್ತಿಗೆ ಬಿಎಂಟಿಸಿ ಆಯ್ಕೆಯಾಗಿದೆ.

ಚಾಲಕರು, ನಿರ್ವಾಹಕರು ಸೇರಿದಂತೆ ಸಿಬ್ಬಂದಿಯ ದೈಹಿಕ, ಮಾನಸಿಕ ಆರೋಗ್ಯಕ್ಕಾಗಿ ಬಿಎಂಟಿಸಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕಾಲಕಾಲಕ್ಕೆ ಹೃದಯ ತಪಾಸಣಾ ಶಿಬಿರ, ಕಣ್ಣಿನ ಚಿಕಿತ್ಸಾ ಶಿಬಿರ, ಕ್ಯಾನ್ಸರ್‌ ತಪಾಸಣಾ ಶಿಬಿರ, ಮಾನಸಿಕ ಆರೋಗ್ಯ ಶಿಬಿರಗಳನ್ನು ನಡೆಸುತ್ತಿದೆ. ಇದನ್ನೆಲ್ಲ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಿಸೆಂಬರ್‌ನಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT