ಭಾನುವಾರ, ಮೇ 22, 2022
21 °C

₹ 3 ಲಕ್ಷ ಮೌಲ್ಯದ ಬೆಳ್ಳಿ ಕಳವು: ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬ್ಯಾಡರಹಳ್ಳಿ ಬಳಿಯ ಕಾಳಿಕಾನಗರದಲ್ಲಿರುವ ಮಳಿಗೆಯೊಂದರಲ್ಲಿ ಬೆಳ್ಳಿ ವಸ್ತುಗಳನ್ನು ಕಳವು ಮಾಡಿದ್ದ ಆರೋಪದಡಿ, ಅದೇ ಮಳಿಗೆಯ ಕೆಲಸಗಾರ ಚೇತನ್ (26) ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ರಾಮನಗರ ಜಿಲ್ಲೆಯ ಸುಗ್ಗನಹಳ್ಳಿಯ ಚೇತನ್, ಎರಡೂವರೆ ತಿಂಗಳಿನಿಂದ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ. ಆತನಿಂದ ₹ 3 ಲಕ್ಷ ಮೌಲ್ಯದ ಚಿನ್ನದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಮಳಿಗೆ ಮಾಲೀಕರು ಕೆಲಸ ನಿಮಿತ್ತ ಊರಿಗೆ ಹೋಗಿದ್ದರು. ಚೇತನ್ ಮಾತ್ರ ಅಂಗಡಿಯಲ್ಲಿದ್ದ. ಎರಡು ದಿನ ಬಿಟ್ಟು ಮಾಲೀಕರು ಅಂಗಡಿಗೆ ಬರುವಷ್ಟರಲ್ಲೇ ಆರೋಪಿ ಚಿನ್ನದ ವಸ್ತುಗಳನ್ನು ಕದ್ದುಕೊಂಡು ಪರಾರಿಯಾಗಿದ್ದ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು