ಸೋಮವಾರ, ಆಗಸ್ಟ್ 15, 2022
24 °C

ಶಿಕ್ಷಣ ನೀತಿ– ಅಧಿವೇಶನದಲ್ಲಿ ಚರ್ಚೆಯಾಗಲಿ: ಎಸ್‍ಐಒ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ 'ನೂತನ ರಾಷ್ಟ್ರೀಯ ಶಿಕ್ಷಣ ನೀತಿ-2020' ಕುರಿತು ಮುಕ್ತ ಚರ್ಚೆ ನಡೆಸಬೇಕು ಎಂದು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್‍ನ (ಎಸ್‍ಐಒ) ರಾಜ್ಯ ಘಟಕ ಆಗ್ರಹಿಸಿದೆ.

'ಶಿಕ್ಷಣ ನೀತಿಯನ್ನು ಏಕಪಕ್ಷೀಯ ನಿರ್ಧಾರದಿಂದ ತರಾತುರಿಯಲ್ಲಿ ಜಾರಿ ಮಾಡುವ ಕೇಂದ್ರದ ಬಿಜೆಪಿ ಸರ್ಕಾರದ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಇದರಲ್ಲಿ ಕೆಲವು ಗೊಂದಲಕಾರಿ ಅಂಶಗಳಿರುವುದರಿಂದ ಅವುಗಳನ್ನು ಮರೆಮಾಚಿ, ಶಿಕ್ಷಣವನ್ನು ಖಾಸಗೀಕರಣಗೊಳಿಸುವ ಷಡ್ಯಂತ್ರವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ' ಎಂದು ಎಸ್‌ಐಒ ದೂರಿದೆ.

'ಶಿಕ್ಷಣ ನೀತಿಯನ್ನು ವಿಧಾನಮಂಡಲ ಅಧಿವೇಶನದಲ್ಲಿ ಮಂಡಿಸಬೇಕು. ಅದರಲ್ಲಿರುವ ಲೋಪಗಳ ಬಗ್ಗೆ ಜನಪ್ರತಿನಿಧಿಗಳು ಚರ್ಚೆ ನಡೆಸಿದ ನಂತರ ಲೋಪಗಳನ್ನು ಸರಿಪಡಿಸಿ ನಂತರವಷ್ಟೇ ಜಾರಿಗೆ ತರಬೇಕು' ಎಂದು ಸಂಘಟನೆಯು ಆಗ್ರಹಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.