ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಪ್ಪು ಶಿಲೀಂಧ್ರ: 6 ಮಂದಿಗೆ ದೃಢ

Last Updated 27 ಜೂನ್ 2021, 20:52 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಹೊಸದಾಗಿ 6 ಮಂದಿಗೆ ಕಪ್ಪು ಶಿಲೀಂಧ್ರ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೆ ಈ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 1,039ಕ್ಕೆ ಏರಿಕೆಯಾಗಿದೆ.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬರಿಗೆ ಕಪ್ಪು ಶಿಲೀಂಧ್ರ ಸೋಂಕು ಕಾಣಿಸಿಕೊಂಡಿದೆ. ಅಲ್ಲಿ ಈವರೆಗೆ 201 ಮಂದಿ ದಾಖಲಾಗಿದ್ದಾರೆ. ಅದೇ ರೀತಿ, ಬೌರಿಂಗ್ ಆಸ್ಪತ್ರೆಯಲ್ಲಿ ಐವರಿಗೆ ಸೋಂಕು ತಗುಲಿರುವುದು ಖಚಿತಪಟ್ಟಿದೆ. ಅಲ್ಲಿ ಒಟ್ಟು 282 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ.

ಕಪ್ಪು ಶಿಲೀಂಧ್ರ ಸೋಂಕಿತರಲ್ಲಿ ಈವರೆಗೆ 485 ಮಂದಿ ಸರ್ಕಾರಿ ವ್ಯವಸ್ಥೆಯಡಿ ದಾಖಲಾಗಿದ್ದಾರೆ. ಇನ್ನುಳಿದವರು ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಸೋಂಕಿತರಲ್ಲಿ 81 ಮಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT