ಮಂಗಳವಾರ, ಅಕ್ಟೋಬರ್ 27, 2020
22 °C

ಸುಲಿಗೆ ಮಾಡಿದ್ದ ಹಣದಲ್ಲಿ ಪಾಲು ಪಡೆದಿದ್ದ ಇನ್‌ಸ್ಪೆಕ್ಟರ್ ಅಮಾನತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ದರೋಡೆ ಪ್ರಕರಣದ ಆರೋಪಿ ಎಸ್.ಜೆ.ಪಾರ್ಕ್ ಠಾಣೆಯ ಪಿಎಸ್ಐ ಜೀವನ್ ಕುಮಾರ್ ಅವರಿಂದ ಹಣ ಪಡೆದ ಆರೋಪದಡಿ ಠಾಣೆಯ ಇನ್‌ಸ್ಪೆಕ್ಟರ್ ಯೋಗೇಶ್‌ಕುಮಾರ್ ಅವರನ್ನು ಅಮಾನತು ಮಾಡಲಾಗಿದೆ.

ಸಿಟಿ ಮಾರ್ಕೆಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸುಲಿಗೆ ಪ್ರಕರಣದಲ್ಲಿ ಜೀವನ್‌ಕುಮಾರ್ ಹಾಗೂ ಆತನ ಸಂಬಂಧಿಯನ್ನು  ಪೊಲೀಸರು ಬಂಧಿಸಿದ್ದರು. 

ಪ್ರಕರಣದ ವಿಚಾರಣೆ ವೇಳೆ, ಇನ್‌ಸ್ಪೆಕ್ಟರ್ ಯೋಗೇಶ್ ಕುಮಾರ್ ಅವರೂ ಸುಲಿಗೆ ಮಾಡಿದ್ದ ಹಣದಲ್ಲಿ ಪಾಲು ಪಡೆದಿದ್ದ ಸಂಗತಿ ಬಯಲಾಗಿತ್ತು‌. ಇನ್‌ಸ್ಪೆಕ್ಟರ್ ಅಮಾನತು ಮಾಡುವಂತೆ ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಕುಮಾರ್ ಅವರು ಹಾಗು ಹೆಚ್ಚುವರಿ ಪೊಲೀಸ್ ಕಮಿಷನರ್ ಅವರಿಗೆ ವರದಿ ಸಲ್ಲಿಸಿದ್ದರು. 

ವರದಿಯನ್ವಯ ಈಗ ಇನ್‌ಸ್ಪೆಕ್ಟರ್ ಅವರನ್ನು ಅಮಾನತು ಮಾಡಿ ಹೆಚ್ಚುವರಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ‌.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು