ಬೆಂಗಳೂರು: ಚರ್ಮದ ಆರೈಕೆ, ರೋಗಗಳಿಗೆ ಚಿಕಿತ್ಸೆ ಹಾಗೂ ನಕಲಿ ವೈದ್ಯರ ಬಗ್ಗೆ ಜಾಗೃತಿ ಮೂಡಿಸಲು ಬೆಂಗಳೂರು ಚರ್ಮ ರೋಗ ವೈದ್ಯರ ಸಂಘವು ಇದೇ ಭಾನುವಾರ ‘ಸ್ಕಿನ್ನಥಾನ್’ ಓಟ ಹಮ್ಮಿಕೊಂಡಿದೆ.

ನಗರದ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6 ಗಂಟೆಗೆ ಓಟ ಪ್ರಾರಂಭವಾಗಲಿದೆ. ವಿವಿಧ ಸಂಸ್ಥೆಗಳ ಸಹಯೋಗದಲ್ಲಿ 10 ಕಿ.ಮೀ., 5 ಕಿ.ಮೀ. ಮತ್ತು 3 ಕಿ.ಮೀ. ಓಟ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಡಾ.ಎಸ್. ಸಚ್ಚಿದಾನಂದ ತಿಳಿಸಿದ್ದಾರೆ.

‘ಅತಿಯಾಗಿ ಸ್ಟಿರಾಯ್ಡ್ ಬಳಕೆ, ಸ್ವಯಂ ಔಷಧೋಪಚಾರಗಳಿಂದ ಉಂಟಾಗುವ ಅಪಾಯಗಳ ಬಗ್ಗೆಯೂ ಜನರಲ್ಲಿ ಅರಿವು ಮೂಡಿಸಲಾಗುತ್ತದೆ. ಚರ್ಮ ರೋಗಗಳ ಬಗ್ಗೆ ಇರುವು ತಪ್ಪುಕಲ್ಪನೆಗಳನ್ನು ಹೋಗಲಾಡಿಸಲು ಶ್ರಮಿಸಲಾಗುವುದು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.