ಸೋಮವಾರ, ಮಾರ್ಚ್ 30, 2020
19 °C

ನಟ ಯಶ್ ಹತ್ಯೆಗೂ ಸಂಚು ರೂಪಿಸಿದ್ದ ಸ್ಲಂ ಭರತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ರಾಜಗೋಪಾಲನಗರ ಠಾಣೆಯ ರೌಡಿಶೀಟರ್ ಆಗಿದ್ದ ಸ್ಲಂ ಭರತ, ನಟ ಯಶ್ ಹತ್ಯೆಗೂ ಸಂಚು ರೂಪಿಸಿದ್ದ.

ಉತ್ತರ ‌ವಿಭಾಗದ ಪೊಲೀಸರ ಎನ್‌ಕೌಂಟರ್‌ಗೆ ಬಲಿಯಾಗಿರುವ ಭರತ, ಕೆಲ ತಿಂಗಳ ಹಿಂದಷ್ಟೇ ಯಶ್ ಹತ್ಯೆ ಮಾಡಲು ಸಹಚರರ ಜೊತೆ ಸೇರಿ ಸಂಚು ಹಾಕಿದ್ದ. ಅದರಂತೆ ಹತ್ಯೆಗೆ ತೆರಳುತ್ತಿದ್ದ ವೇಳೆಯಲ್ಲಿ ಸಿಸಿಬಿ ಪೊಲೀಸರು ಆತನನ್ನು ಸೆರೆ ಹಿಡಿದಿದ್ದರು. 

ಜಾಮೀನು ಮೇಲೆ ಹೊರಬಂದಿದ್ದ ಆತ, ಪುನಃ ಅಪರಾಧ ಕೃತ್ಯಗಳಲ್ಲಿ ತೊಡಗಿದ್ದ. ಜನವರಿಯಲ್ಲಿ ಬನಶಂಕರಿಯಲ್ಲಿ ಸ್ನೇಹಿತರ ಹುಟ್ಟು ಹಬ್ಬದಲ್ಲಿ ಕಾಣಿಸಿಕೊಂಡಿದ್ದ. ಬಂಧಿಸಲು ಹೋದ ಇನ್‌ ಸ್ಪೆಕ್ಟರ್ ಮೇಲೆಯೇ ಹಲ್ಲೆ ಮಾಡಿ ಪರಾರಿಯಾಗಿದ್ದ. ಮೊನ್ನೆಯಷ್ಟೇ ಉತ್ತರ ಪ್ರದೇಶದಲ್ಲಿ ಆತನನ್ನು ಪೊಲೀಸರು ಬಂಧಿಸಿ ನಗರಕ್ಕೆ ಕರೆತಂದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು