ಶುಕ್ರವಾರ, ಮೇ 27, 2022
30 °C

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ವಾಗ್ವಾದ ಕೊಲೆಯಲ್ಲಿ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೆಳೆಯನ ಜನ್ಮದಿನಾಚರಣೆಯಲ್ಲಿ ಭಾಗಿಯಾಗಿದ್ದ ಚಂದ್ರು

ಬೆಂಗಳೂರು: ಜಗಜೀವನರಾಮ್ ನಗರ ಠಾಣೆ ವ್ಯಾಪ್ತಿಯಲ್ಲಿ ಚಂದ್ರಶೇಖರ್ (19) ಎಂಬುವರ ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆಗೆ ಮುಂದುವರಿಸಿದ್ದು, ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಬಳಿಕ ನಡೆದ ವಾಗ್ವಾದ ಕೊಲೆಯಲ್ಲಿ ಅಂತ್ಯವಾಗಿದೆ ಎಂದು ತಿಳಿದು ಬಂದಿದೆ.

'ಮೃತ ಚಂದ್ರು ರೈಲ್ವೆ ಇಲಾಖೆಯಲ್ಲಿ ಅಪ್ರೆಂಟಿಸ್ ಆಗಿ ಕೆಲಸ ಮಾಡುತ್ತಿದ್ದ. ಆತ ಗೆಳೆಯ ಸೈಮನ್‌ನ ಜನ್ಮದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳಿದ್ದ' ಎಂದು ಡಿಸಿಪಿ ಅನುಚೇತ್ ತಿಳಿಸಿದ್ದಾರೆ.

'ಬುಧವಾರ ಬೆಳಿಗ್ಗೆ  2 ಗಂಟೆ ಸುಮಾರಿಗೆ ಜೆ.ಜೆ.ನಗರ ಠಾಣೆ ವ್ಯಾಪ್ತಿಯ ಹಳೆ ಗುಡ್ಡದಹಳ್ಳಿ ಬಳಿ ಘಟನೆ ನಡೆದಿದೆ. ಕಬಾಬ್ ಸೆಂಟರ್‌ವೊಂದರ ಬಳಿ ಚಂದ್ರು ಹಾಗೂ ಆರೋಪಿಗಳ ನಡುವೆ ಜಗಳ ಶುರುವಾಗಿದೆ. ಈ ವೇಳೆ ಆರೋಪಿಗಳ ಪೈಕಿ ಒಬ್ಬ ಚಾಕುವಿನಿಂದ ಚಂದ್ರು ತೊಡೆಗೆ ಇರಿದಿದ್ದಾನೆ. ತೀವ್ರ ರಕ್ತಸ್ರಾವದಿಂದ ಬಳಲಿದ್ದ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆತ ಮೃತಪಟ್ಟಿದ್ದಾನೆ' ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: 

'ಕಬಾಬ್ ಸೆಂಟರ್‌ಗಾಗಿ ಹುಡುಕಾಟ ನಡೆಸುತ್ತಿರುವಾಗ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ನಂತರ ಎರಡೂ ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಅದು ಕೊಲೆಯಲ್ಲಿ ಅಂತ್ಯವಾಗಿದೆ' ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು