ಶುಕ್ರವಾರ, ಡಿಸೆಂಬರ್ 6, 2019
21 °C

ಸ್ಮಾರ್ಟ್ ಕಾರ್ಡ್ ಇದ್ದರೆ ವಿಧಾನಸೌಧ ಪ್ರವೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವಿಧಾನಸೌಧ, ವಿಕಾಸಸೌಧ, ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು, ನೌಕರರು ಸ್ಮಾರ್ಟ್ ಕಾರ್ಡ್ ಧರಿಸದೆ ಬಂದರೆ ಕಚೇರಿ ಒಳಕ್ಕೆ ಪ್ರವೇಶ ನೀಡದಿರಲು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ನಿರ್ಧರಿಸಿದೆ.

ಅಧಿಕಾರಿ, ನೌಕರರಿಗೆ ಸ್ಮಾರ್ಟ್ ಕಾರ್ಡ್‌ಗಳನ್ನು ನೀಡಿದ್ದು, ಕಚೇರಿ ಸಮಯದಲ್ಲಿ ಕಡ್ಡಾಯವಾಗಿ ಧರಿಸುವಂತೆ ಸೂಚನೆ ನೀಡಲಾಗಿದೆ. ಆದರೆ ಕೆಲವರು ಧರಿಸದೆ ಇರುವುದು ಕಂಡುಬಂದಿದ್ದು, ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಇನ್ನು ಮುಂದೆ ಈ ಕಾರ್ಡ್ ಧರಿಸುವುದನ್ನು ಕಡ್ಡಾಯಗೊಳಿಸಿ ಆದೇಶಿಸಲಾಗಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು