ಬುಧವಾರ, ಜುಲೈ 28, 2021
23 °C

ಬೆಂಗಳೂರಿನಲ್ಲಿ ಸ್ಮಾರ್ಟ್ ಆರೋಗ್ಯ ಸೇವೆ: ಅಧಿಕಾರಿಗಳ ಜೊತೆ ಉಪಮುಖ್ಯಮಂತ್ರಿ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಉನ್ನತ ತಂತ್ರಜ್ಞಾನ ಬಳಸಿ ಸ್ಮಾರ್ಟ್ ವೈದ್ಯಕೀಯ ಸೇವೆ ಒದಗಿಸಲು ಸಿದ್ಧತೆ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಆರೋಗ್ಯ ಸಂರಕ್ಷಣೆ ಸಂಬಂಧ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸೋಮವಾರ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡಿದರು.

ಎಲ್ಲ ಆರೋಗ್ಯ ಕೇಂದ್ರದಲ್ಲೂ ದಿನದ 24 ಗಂಟೆಯೂ ತಜ್ಞ ವೈದ್ಯರ ಸೇವೆ ಲಭಿಸುವಂತೆ ಮಾಡಲಿದ್ದೇವೆ. ಟೆಲಿಮೆಡಿಸೀನ್ ಸೌಲಭ್ಯ ಹಾಗೂ ವಿಡಿಯೋ ಕಾನ್ಪರೆನ್ಸ್ ಮೂಲಕ ತಜ್ಞ ವೈದ್ಯರು ರೋಗಿಯ ಜೊತೆ ಸಮಲೋಚನೆ‌ ನಡೆಸುವ ವ್ಯವಸ್ಥೆ ರೂಪಿಸಲಿದ್ದೇವೆ ಎಂದರು.

ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಪಾಲಿಕೆ ಆಸ್ಪತ್ರೆ, ಸಾರ್ವಜನಿಕರ ಆರೋಗ್ಯ ಕೇಂದ್ರಗಳಲ್ಲಿ ಔಷಧಿಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು, ಎಲ್ಲಾ ವಾರ್ಡ್‌ಗಳಲ್ಲಿ ಜನೌಷಧ ಕೇಂದ್ರಗಳನ್ನು ತೆರೆಯುವುದು, ಆಮ್ಲಜನಕ ಪೂರೈಕೆ ವ್ಯವಸ್ಥೆ, ಹೈಟೆಕ್ ಸೆಂಟರ್‌ಗಳು, ಸ್ಮಾರ್ಟ್ ಕ್ಲಿನಿಕ್, ರೆಫರಲ್ ಆಸ್ಪತ್ರೆಗಳಲ್ಲಿ ಉನ್ನತ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಬಗ್ಗೆ ನಡೆದಿರುವ ತಯಾರಿ ಪರಿಶೀಲನೆ ನಡೆಸಿದರು.

ಮೇಯರ್ ಗೌತಮ್ ಕುಮಾರ್, ಉಪಮೇಯರ್ ರಾಮಮೋಹನ ರಾಜು, ಸಾರ್ವಜನಿಕ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜಿ.ಮಂಜುನಾಥ್ ರಾಜು., ಆಯುಕ್ತ ಬಿ.ಎಚ್.ಅನಿಲ್ ಕುಮಾರ್, ವಿಶೇಷ ಆಯುಕ್ತ ಡಾ. ರವಿಕುಮಾರ್ ಸುರಪುರ, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜಯೇಂದ್ರ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು