ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಮಾರ್ಟ್‌ ಪಾರ್ಕಿಂಗ್‌ಗೆ ಮತ್ತೆ ಟೆಂಡರ್‌

Last Updated 15 ಮಾರ್ಚ್ 2019, 19:41 IST
ಅಕ್ಷರ ಗಾತ್ರ

ಬೆಂಗಳೂರು: ನಗರದ 83 ರಸ್ತೆಗಳಲ್ಲಿ ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಬಿಬಿಎಂಪಿ ಮತ್ತೆ ಟೆಂಡರ್‌ ಕರೆದಿದೆ.

‘ಈ ಹಿಂದೆ ನಡೆದ ಟೆಂಡರ್‌ಗೆ ಪ್ರಕ್ರಿಯೆಯಲ್ಲಿ ಕೆಲವು ಮಾಹಿತಿ ಸಮರ್ಪಕವಾಗಿರಲಿಲ್ಲ ಎಂಬ ಕಾರಣಕ್ಕೆ ಅದನ್ನು ರದ್ದುಪಡಿಸಿ ಮರುಟೆಂಡರ್‌ ಕರೆಯುವಂತೆ ನಗರಾಭಿವೃದ್ಧಿ ಇಲಾಖೆ ಸೂಚಿಸಿತ್ತು. ಹಾಗಾಗಿ ಮತ್ತೆ ಟೆಂಡರ್ ಕರೆಯಲಾಗಿದೆ’ ಎಂದು ಪಾಲಿಕೆ ಆಯುಕ್ತ ಎನ್‌.ಮಂಜುನಾಥ ಪ್ರಸಾದ್‌ ತಿಳಿಸಿದರು.

‘ನಗರದ ಅನೇಕ ರಸ್ತೆಗಳಲ್ಲಿ ವಾಹನ ನಿಲುಗಡೆಗೆ ಈಗಾಗಲೇ ಅವಕಾಶ ಕಲ್ಪಿಸಲಾಗಿದೆ. ಆದರೆ, ಅದರಿಂದ ಪಾಲಿಕೆಗೆ ಯಾವುದೇ ವರಮಾನ ಬರುತ್ತಿಲ್ಲ. ಸ್ಮಾರ್ಟ್‌ ಪಾರ್ಕಿಂಗ್‌ ವ್ಯವಸ್ಥೆಯಿಂದ ಸಾರ್ವಜನಿಕರ ವಾಹನ ನಿಲುಗಡೆಗೆ ಉತ್ತಮ ಸೌಕರ್ಯವೂ ಸಿಗಲಿದೆ. ಜೊತೆಗೆ ಪಾಲಿಕೆಗೆ 10 ವರ್ಷಗಳಲ್ಲಿ ₹ 390 ಕೋಟಿಯಿಂದ ರಿಂದ ₹ 400 ಕೋಟಿಗಳಷ್ಟು ವರಮಾನ ಬರಲಿದೆ’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT