ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವನಹಳ್ಳಿ: ವಿಮಾನ ನಿಲ್ದಾಣದಲ್ಲಿ ಒಂದೇ ದಿನ ₹ 1 ಕೋಟಿ ಮೌಲ್ಯದ ಚಿನ್ನ ಜಪ್ತಿ

Published 20 ಮಾರ್ಚ್ 2024, 16:12 IST
Last Updated 20 ಮಾರ್ಚ್ 2024, 16:12 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೋಮವಾರ (ಮಾರ್ಚ್‌ 18ರಂದು) ಒಂದೇ ದಿನ ಕಸ್ಟಮ್ಸ್ ಅಧಿಕಾರಿಗಳು ವಿದೇಶದಿಂದ ಬಂದಿಳಿದ ಪ್ರಯಾಣಿಕರು ಕಳ್ಳಸಾಗಣೆ ಮಾಡುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.

ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಅಧಿಕಾರಿಗಳು ಒಟ್ಟು ₹1 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ಪ್ರಕರಣದ ಆರೋಪಿಗಳು ಈ ಮೊದಲು ಚಿನ್ನ ಕಳ್ಳಸಾಗಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲೇಷ್ಯಾದ ಕ್ವಾಲಾಂಲಪುರದಿಂದ ಸೋಮವಾರ ರಾತ್ರಿ ಬಂದಿಳಿದ ಪ್ರಯಾಣಿಕನಿಂದ 197.43 ಗ್ರಾಂ ತೂಕದ ಚಿನ್ನ ಜಪ್ತಿ ಮಾಡಲಾಗಿದ್ದು, ಅದರ ಮೌಲ್ಯ ₹12.55 ಲಕ್ಷ ಎಂದು ಅಂದಾಜಿಸಲಾಗಿದೆ. ಆತ ತೊಟ್ಟಿದ್ದ ಬಟ್ಟೆಯಲ್ಲಿ ಆಂಗ್ಲ ಅಕ್ಷರ ‘ಓ’ ಆಕಾರದಲ್ಲಿ ಚಿನ್ನದ ಸುರಳಿ ಇರುವುದನ್ನು ಅಧಿಕಾರಿಗಳು ಪತ್ತೆ ಮಾಡಿದರು. 

ಕುವೈತ್‌ನಿಂದ ಬಂದ ಮಹಿಳೆಯು ಚಿನ್ನದ ಸರ, ಬಳೆ, ಪೆಂಡೆಂಟ್‌ ಕತ್ತರಿಸಿ ಬಟ್ಟೆಯಲ್ಲಿ ಬಚ್ಚಿಟ್ಟುಕೊಂಡಿದ್ದರು. 196.73 ಗ್ರಾಂ ಚಿನ್ನದ ಆಭರಣಗಳನ್ನು ಆಕೆಯಿಂದ ವಶಕ್ಕೆ ಪಡೆಯಲಾಗಿದೆ. ಅದರ ಮೌಲ್ಯ ₹12.51 ಲಕ್ಷ ಎಂದು ಅಂದಾಜಿಸಲಾಗಿದೆ.

ಮದೀನಾ ಮತ್ತು ಬಹರೇನ್‌ನಿಂದ ಬಂದಿಳಿದ ಇಬ್ಬರು ಪ್ರಯಾಣಿಕರು ಕಸ್ಟಮ್ಸ್‌ ಅಧಿಕಾರಿಗಳ ಗಸ್ತಿನ ವೇಳೆ ಸಿಕ್ಕಿಬಿದ್ದಿದ್ದಾರೆ. ಇಬ್ಬರಿಂದ 1.167 ಕೆ.ಜಿ. ಚಿನ್ನ ಪತ್ತೆಯಾಗಿದೆ. ಅದರ ಮೌಲ್ಯ ₹74.64 ಲಕ್ಷ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

ವೈತ್‌ನಿಂದ ಆಗಮಿಸಿದ ಮಹಿಳಾ ಪ್ರಯಾಣಕಿ ಬಳಿ ವಶಕ್ಕೆ ಪಡೆದ ಚಿನ್ನ
ವೈತ್‌ನಿಂದ ಆಗಮಿಸಿದ ಮಹಿಳಾ ಪ್ರಯಾಣಕಿ ಬಳಿ ವಶಕ್ಕೆ ಪಡೆದ ಚಿನ್ನ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT