ಬೆಂಗಳೂರು | ಅಕ್ರಮ ಸಾಗಾಟ: ₹ 4.50 ಕೋಟಿ ಮೌಲ್ಯದ ರಕ್ತಚಂದನ ಜಪ್ತಿ

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹4.50 ಕೋಟಿ ಮೌಲ್ಯದ ರಕ್ತಚಂದನವನ್ನು ನಗರದ ಸಿಸಿಬಿ ಪೊಲೀಸರು ಜಪ್ತಿ ಮಾಡಿದ್ದಾರೆ.
‘ಆಂಧ್ರಪ್ರದೇಶ ಹಾಗೂ ತಮಿಳುನಾಡಿನಿಂದ ಬೆಂಗಳೂರು ಮೂಲಕ ರಕ್ತಚಂದನ ಸಾಗಣೆ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಬಂದಿತ್ತು. ಪೊಲೀಸರ ವಿಶೇಷ ತಂಡಗಳು ದಾಳಿ ಮಾಡಿದ್ದವು’ ಎಂದು ಸಿಸಿಬಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.
‘ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ’ ಎಂದೂ ಹೇಳಿದರು.
ಇದನ್ನೂ ಓದಿ... ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಮನೆ, ಕಚೇರಿ ಮೇಲೆ ಐ.ಟಿ ದಾಳಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.