ಬೆಂಗಳೂರು: ಕೆಎಎಸ್ ಅಧಿಕಾರಿಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿದ್ದ ಮೈಸೂರಿನ ಸ್ನೇಹಮಯಿ ಕೃಷ್ಣ ಅವರನ್ನು ಶನಿವಾರ ಬಿಡುಗಡೆ ಮಾಡಲಾಗಿದ್ದು, ಮತ್ತೊಬ್ಬ ಆರೋಪಿ ವಿನೋದ್ ಅವರನ್ನು ಬಂಧಿಸಲಾಗಿದೆ.

ಮೈಸೂರಿನ ಬೋಗಾದಿ ನಿವಾಸಿ ವಿನೋದ್.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ, ಕೆಎಎಸ್ ಅಧಿಕಾರಿ ಡಿ.ಬಿ.ನಟೇಶ್ ಅವರು ಸ್ನೇಹಮಯಿ ಕೃಷ್ಣ ವಿರುದ್ಧ ದೂರು ನೀಡಿದ್ದರು. ಫೆ.18ರಂದು ಬೆಂಗಳೂರು ನಗರ ಸೈಬರ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣವೊಂದರ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಅವರು ತಮ್ಮ ಪುತ್ರನ ಜತೆಗೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಶುಕ್ರವಾರ ಬಂದಿದ್ದಾಗ, ಅವರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಸಿಸಿಬಿ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದರು.

‘ವಿಡಿಯೊ ಹಾಗೂ ಮಾಹಿತಿ ಹಂಚಿಕೊಂಡವರ ಬಗ್ಗೆ ಸ್ನೇಹಮಯಿ ಕೃಷ್ಣ ಅವರು ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ. ಅವರ ಹೇಳಿಕೆ ದಾಖಲಿಸಿಕೊಂಡು ಬಿಡುಗಡೆ ಮಾಡಲಾಗಿದೆ. ಫೆ.24ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ’ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಮಾಹಿತಿ ನೀಡಿದ್ದ ವಿನೋದ್: ‘ವಿನೋದ್ ಹಾಗೂ ದೂರುದಾರ ಡಿ.ಬಿ.ನಟೇಶ್ ಅವರ ನಡುವೆ ವ್ಯವಹಾರಕ್ಕೆ ಸಂಬಂಧಿಸಿದಂತೆ ದ್ವೇಷ ಉಂಟಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ನಟೇಶ್ ವಿರುದ್ಧ ದ್ವೇಷ ಸಾಧಿಸಲು ಲಾಭಕ್ಕಾಗಿ ಸ್ನೇಹಮಯಿ ಕೃಷ್ಣ ಅವರನ್ನು ವಿನೋದ್ ಸಂಪರ್ಕಿಸಿದ್ದರು. ಸುಳ್ಳು ಮಾಹಿತಿಯನ್ನು ಸ್ನೇಹಮಯಿ ಕೃಷ್ಣ ಅವರಿಗೆ ನೀಡಿದ್ದರು. ತನಗೆ ಬಂದ ಮಾಹಿತಿಯನ್ನು ಖಚಿತಪಡಿಸಿಕೊಳ್ಳದೇ ಸ್ನೇಹಮಯಿ ಕೃಷ್ಣ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅಧಿಕಾರಿಯ ಚಾರಿತ್ರ್ಯವಧೆ ಮಾಡುವ ಉದ್ದೇಶದಿಂದ ಕೃತ್ಯ ಎಸಗಿರುವುದು ಕಂಡುಬಂದಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

‘ನಾನು ಆಡಿಯೊ ಸೃಷ್ಟಿಸಿ ಫೇಸ್ಬುಕ್ನಲ್ಲಿ ಹಾಕಿದ್ದೇನೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಸುಳ್ಳು ಆರೋಪ ಮಾಡಿದ್ದೇನೆ’ ಎಂದು ನನ್ನ ವಿರುದ್ಧ ನಟೇಶ್ ದೂರು ನೀಡಿದ್ದರೆಂದು ಸ್ನೇಹಮಯಿ ಕೃಷ್ಣ ಹೇಳಿದರು.

‘ದೂರು ಆಧರಿಸಿ ಪ್ರಕರಣ ದಾಖಲಾಗಿತ್ತು. ವಿಚಾರಣೆಗಾಗಿ ಕರೆತರಲಾಗಿತ್ತೇ ಹೊರತು ನನ್ನನ್ನು ಬಂಧಿಸಿರಲಿಲ್ಲ. ನಟೇಶ್ ಹಾಗೂ ವಿನೋದ್ ಮಧ್ಯೆ ಹಣಕಾಸಿನ ವಿಚಾರ ನಡೆದಿತ್ತು. ನಟೇಶ್ ದುಡ್ಡು ಕೇಳಬಾರದೆಂದು ಈ ರೀತಿ ಮಾಡಿರುವ ಸಾಧ್ಯತೆಯಿದೆ. ಆದರೆ ಆಡಿಯೊ ನಿಜ’ ಎಂದು ಕೃಷ್ಣ ಪ್ರತಿಕ್ರಿಯೆ ನೀಡಿದರು.

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದ ಸಿಸಿಬಿ: ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ದಾಖಲೆ ಹಾಗೂ ಧ್ವನಿ ಕ್ಲಿಪ್ ಹಂಚಿಕೊಂಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸಲಾಗಿದೆ ಎಂದು ಸಿಸಿಬಿ ಪೊಲೀಸರು ಶುಕ್ರವಾರ ಸಂಜೆ ಅಧಿಕೃತ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದರು. ಆದರೆ, ಅವರನ್ನು ಪ್ರಕರಣದ ಸಂಬಂಧ ವಿಚಾರಣೆಗೆ ವಶಕ್ಕೆ ಪಡೆದುಕೊಳ್ಳಲಾಗಿತ್ತು.

Cut-off box - ಕ್ಷಮೆಯಾಚನೆ ‘ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ನಾನು ಮಾಡಿದ್ದ ಆರೋಪ ಸುಳ್ಳು. ಅವರ ಕ್ಷಮೆ ಕೋರುತ್ತೇನೆ’ ಎಂದು ಸ್ನೇಹಮಯಿ ಕೃಷ್ಣ ಹೇಳಿದರು. ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ ಹಗರಣಕ್ಕೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.