ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯವನ್ನು ಅಕ್ಟೋಬರ್ 4ರಿಂದ ಆರಂಭಿಸಲಾಗುತ್ತದೆ ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ತಿಳಿಸಿದರು.

ಜಿಬಿಎ ವ್ಯಾಪ್ತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದಂತೆ ವರ್ಚ್ಯುವಲ್ ಮೂಲಕ ಶುಕ್ರವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಸಮೀಕ್ಷೆ ನಡೆಸಲು ವಿವಿಧ ಇಲಾಖೆಗಳಿಂದ ನಿಯೋಜಿಸಲಾದ ಸಮೀಕ್ಷಾದಾರರಿಗೆ ಆಯಾ ನಗರ ಪಾಲಿಕೆಗಳಲ್ಲಿ ಎರಡು ಬಾರಿ ತರಬೇತಿ ನೀಡಲಾಗಿದ್ದು, ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಲು ಸೂಚನೆ ನೀಡಿದರು.

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಆಯುಕ್ತರ ಮೇಲ್ವಿಚಾರಣೆಯಲ್ಲಿ ಸಮೀಕ್ಷಾ ಕಾರ್ಯ ಜರುಗಲಿದ್ದು, ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತರು ಮತ್ತು ಉಪ ಆಯುಕ್ತರು ಸಮೀಕ್ಷಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.

ನೋಡಲ್ ಅಧಿಕಾರಿ: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬರಂತೆ ಕೆಎಎಸ್ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳೆಂದು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಅದರಂತೆ ಒಟ್ಟು 34 ಕೆಎಎಸ್ ಅಧಿಕಾರಿಗಳು ಸಮೀಕ್ಷಾ ಕಾರ್ಯವನ್ನು ಸುಗಮವಾಗಿ ನಿರ್ವಹಿಸಲು, ಸಮೀಕ್ಷಾದಾರರು ಮತ್ತು ಸರ್ಕಾರದ ಮಧ್ಯೆ ಸಮನ್ವಯತೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಪ್ರತಿ ವಾರ್ಡ್ಗೆ ಒಬ್ಬರಂತೆ ಗ್ರೂಪ್- ಎ ವೃಂದದ ಅಧಿಕಾರಿಗಳನ್ನು ವಾರ್ಡ್ ಮೇಲ್ವಿಚಾರಕರಾಗಿ/ಚಾರ್ಜ್ ಅಧಿಕಾರಿಗಳೆಂದು ನೇಮಿಸಲಾಗಿದ್ದು, ಅವರು ಆ ವಾರ್ಡ್ನ ಸಮೀಕ್ಷೆಯ ಸಂಪೂರ್ಣ ಮೇಲ್ವಿಚಾರಣೆಯನ್ನು ನಿರ್ವಹಿಸಲಿದ್ದಾರೆ ಎಂದರು.

ನಾಗರಿಕರಲ್ಲಿ ಮನವಿ: ಜಿಬಿಎ ವ್ಯಾಪ್ತಿಯಲ್ಲಿ ಶನಿವಾರದಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯ ಆರಂಭವಾಗಲಿದ್ದು, ನಗರದ ಎಲ್ಲಾ ನಾಗರಿಕರು ಅಗತ್ಯ ದಾಖಲೆಗಳನ್ನು (ಆಧಾರ್ ಕಾರ್ಡ್/ರೇಷನ್ ಕಾರ್ಡ್ ಸೇರಿದಂತೆ ಇತರೆ ದಾಖಲೆಗಳು) ಸಿದ್ಧವಾಗಿಟ್ಟುಕೊಂಡು ಸಮೀಕ್ಷಾದಾರರಿಗೆ ಸಹಕರಿಸಬೇಕು ಎಂದು ಮಹೇಶ್ವರ್ ರಾವ್ ಮನವಿ ಮಾಡಿಕೊಂಡರು.

50,57,469; ಜಿಬಿಎ ವ್ಯಾಪ್ತಿಯಲ್ಲಿರುವ ಒಟ್ಟು ಮನೆಗಳು

14,65,684; ಪಶ್ಚಿಮ ನಗರ ಪಾಲಿಕೆಯ 64 ವಾರ್ಡ್ ವ್ಯಾಪ್ತಿಯ ಮನೆಗಳು

10,94,793; ದಕ್ಷಿಣ ನಗರ ಪಾಲಿಕೆಯ 34 ವಾರ್ಡ್ ವ್ಯಾಪ್ತಿಯ ಮನೆಗಳು

10,22,926; ಉತ್ತರ ನಗರ ಪಾಲಿಕೆಯ 41 ವಾರ್ಡ್ ವ್ಯಾಪ್ತಿಯ ಮನೆಗಳು

9,12,713; ಪೂರ್ವ ನಗರ ಪಾಲಿಕೆಯ 17 ವಾರ್ಡ್ ವ್ಯಾಪ್ತಿಯ ಮನೆಗಳು

5,61,353; ಕೇಂದ್ರ ನಗರ ಪಾಲಿಕೆಯ 42 ವಾರ್ಡ್ ವ್ಯಾಪ್ತಿಯ ಮನೆಗಳು

17,500; ಸಮೀಕ್ಷೆದಾರರಿಗೆ ತರಬೇತಿ

34; ನೋಡಲ್ ಅಧಿಕಾರಿಗಳಾಗಿ ಕೆಎಎಸ್ ಅಧಿಕಾರಿಗಳು

15ರಿಂದ 20; ಸಮೀಕ್ಷೆದಾರರಿಗೆ ಒಬ್ಬ ಉಪ ಮೇಲ್ವಿಚಾರಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.