ಶನಿವಾರ, ಮಾರ್ಚ್ 6, 2021
32 °C
ಕಾರ್ಯಕ್ರಮದಲ್ಲಿ ಬಿ.ಎಲ್‌.ಶಂಕರ್‌ ಅಭಿಮತ

‘ಕಪ್ಪು ಚುಕ್ಕೆ ಇಲ್ಲದೆ ಸಮಾಜ ಸೇವೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ಡಾ.ಸಿ.ಎನ್‌.ಮಂಜುನಾಥ್ ಅವರು ರಾಜಕಾರಣದ ನಂಟು ಹೊಂದಿದ ಕುಟುಂಬದ ಸದಸ್ಯರಾಗಿದ್ದರೂ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಜನ ಸೇವೆ ಸಲ್ಲಿಸಿ ಜನಪ್ರಿಯರಾಗಿದ್ದಾರೆ. ಜಯದೇವ ಹೃದ್ರೋಗ ಆಸ್ಪತ್ರೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸೆಡ್ಡು ಹೊಡೆಯುವಂತೆ ಕಟ್ಟಿ ಬೆಳೆಸಿದ್ದಾರೆ’ ಎಂದು ಕರ್ನಾಟಕ ಚಿತ್ರಕಲಾ ಪರಿಷತ್‌ ಅಧ್ಯಕ್ಷ ಡಾ.ಬಿ.ಎಲ್‌.ಶಂಕರ್ ಹೇಳಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ ಅವರಿಗೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ರಂಗಚೇತನ ಸಂಸ್ಕೃತಿ ಕೇಂದ್ರವು ನಗರದಲ್ಲಿ ಶನಿವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಮಂಜುನಾಥ್‌ ಸರಳ ವ್ಯಕ್ತಿತ್ವ ಉಳ್ಳವರು. ರೋಗಿಗಳನ್ನು ಮನೆಯ ಸದಸ್ಯರಂತೆ ಕಾಣುತ್ತಾರೆ. ಆಸ್ಪತ್ರೆ ಇಷ್ಟು ಜನಪ್ರಿಯಗೊಳ್ಳಲು ಅಲ್ಲಿನ ಸಿಬ್ಬಂದಿಯ ನಿಸ್ವಾರ್ಥ ಸೇವೆಯೂ ಕಾರಣ’ ಎಂದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಕೆ.ಎಸ್.ರವೀಂದ್ರನಾಥ್, ‘ರಾಜಕೀಯ ಕ್ಷೇತ್ರದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಸಚಿವರಾಗುವ ಅವಕಾಶ ಮಂಜುನಾಥ ಅವರಿಗೆ ಸಿಕ್ಕಿದ್ದರೆ, ಆರೋಗ್ಯ ಕ್ಷೇತ್ರದಲ್ಲಿ ಸಮಗ್ರ ಬದಲಾವಣೆ ತರುತ್ತಿದ್ದರು’ ಎಂದರು.

‘ರಾಜ್ಯದ ಬೆಂಗಳೂರು, ಕಲಬುರ್ಗಿ ಹಾಗೂ ಮೈಸೂರಿನಲ್ಲೂ ಜಯದೇವ ಸಂಸ್ಥೆಯ ಆಸ್ಪತ್ರೆಗಳಿವೆ. ಬೆಂಗಳೂರಿನ ಆಸ್ಪತ್ರೆಯಲ್ಲಿ 1,150 ಹಾಸಿಗೆಗಳಿವೆ. ಸ್ಪೆಷಲ್ ವಾರ್ಡ್ ನಲ್ಲಿರುವ 300 ಹಾಸಿಗೆಗಳು ಪ್ರತಿದಿನ ತುಂಬಿರುತ್ತವೆ. ಅವರ ಉತ್ತಮ ಸೇವೆ ಇದಕ್ಕೆಲ್ಲ ಕಾರಣ‌’ ಎಂದು ತಿಳಿಸಿದರು.

ಮಂಜುನಾಥ್ ಅವರ ಸಮಗ್ರ ಬರಹ ಮತ್ತು ಭಾಷಣಗಳನ್ನು ಹಾಗೂ ಹೃದಯರೋಗಕ್ಕೆ ಸಂಬಂಧಿಸಿದ ಲೇಖನಗಳನ್ನು ಒಳಗೊಂಡ 'ದವನ' ಗ್ರಂಥವನ್ನು ಬಿಡುಗಡೆ ಮಾಡಿದರು. ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಡಾ.ಶಿವರಾಜ ವಿ.ಪಾಟೀಲ ಅವರು ಸಾಕ್ಷ್ಯ ಚಿತ್ರ ಬಿಡುಗಡೆ‌ ಮಾಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು