ಬುಧವಾರ, 24 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ಜಲ ಜೀವನ್ ಮಿಷನ್ ಯೋಜನೆಗೆ ಆಕ್ಷೇಪ

Published 27 ಜೂನ್ 2023, 13:55 IST
Last Updated 27 ಜೂನ್ 2023, 13:55 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಯೋಜನೆಯಾದ ಜಲ ಜೀವನ್ ಮಿಷನ್‌ಗೆ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಕರ್ನಾಟಕ ರಾಜ್ಯ ಸಮಿತಿ ಆಕ್ಷೇಪ ವ್ಯಕ್ತಪಡಿಸಿದೆ. 

‘ಸಾವಿರಾರು ಕೋಟಿ ರೂಪಾಯಿ ವೆಚ್ಚದ ಈ ಯೋಜನೆಯ ಅನುಷ್ಠಾನ ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಾದ್ಯಂತ ನಡೆಯುತ್ತಿದೆ. ಸರ್ಕಾರಗಳ ಹಣದೊಂದಿಗೆ ಜನರಿಂದಲೂ ಪ್ರತಿ ಗ್ರಾಮದಲ್ಲಿ ಸಮುದಾಯವಂತಿಗೆಯ ಮೂಲಕ ಹಣ ಸಂಗ್ರಹಿಸಲಾಗುತ್ತದೆ. ಇದರೊಂದಿಗೆ ‘ಹರ್ ಘರ್ ಜಲ್’ ಎಂದು ಹೇಳುತ್ತಾ ಪ್ರತಿಯೊಂದು ನಳಕ್ಕೂ ಮೀಟರ್ ಅಳವಡಿಸಲಾಗುತ್ತದೆ. ಇದರಿಂದ ನೀರಿಗೆ ದುಬಾರಿ ಬಿಲ್ ತೆರಬೇಕಾಗುತ್ತದೆ. ಕನಿಷ್ಠ ಮೂಲಭೂತ ಅವಶ್ಯಕತೆಯಾದ ನೀರಿಗೂ ಮೀಟರ್ ಅಳವಡಿಸಿ, ಹಣ ದೋಚುವ ಹುನ್ನಾರವನ್ನು ಸರ್ಕಾರ ಮರೆಮಾಚುತ್ತಿವೆ’ ಎಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ. ಉಮಾ ಆರೋಪಿಸಿದ್ದಾರೆ. 

‘ಈಗಾಗಲೇ ಖಾಸಗೀಕರಣ ನೀತಿಗಳಿಂದ ತತ್ತರಿಸುವ ಜನತೆ, ಶಿಕ್ಷಣ, ಆರೋಗ್ಯ, ಅಡುಗೆ ಅನಿಲ ಹಾಗೂ ಇತರ ಕನಿಷ್ಠ ಅವಶ್ಯಕತೆಗಳಿಗೆ ದುಬಾರಿ ಶುಲ್ಕ ಪಾವತಿಸಲಾಗದೆ ಸಂಕಷ್ಟದಲ್ಲಿದ್ದಾರೆ. ಆದ್ದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರವು ಹಣ ವಸೂಲಿಗೆ ದಾರಿ ಮಾಡಿಕೊಡುವ ಜಲ ಜೀವನ್ ಮಿಷನ್ ಯೋಜನೆಯನ್ನು ಕೈಬಿಟ್ಟು, ಹಿಂದಿನಂತೆಯೇ ಜನರಿಗೆ ನೀರು ಸರಬರಾಜು ಮಾಡುವ ನೀತಿಯನ್ನು ಮುಂದುವರಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT