ಶನಿವಾರ, ಜನವರಿ 25, 2020
27 °C

ಕಟ್ಟಡದಿಂದ ಬಿದ್ದು ಟೆಕಿ ಸಾವು; ಆತ್ಮಹತ್ಯೆ ಶಂಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋಣನಕುಂಟೆ ಠಾಣೆ ವ್ಯಾಪ್ತಿಯ ಕಟ್ಟಡವೊಂದರ ಮೂರನೇ ಮಹಡಿಯಿಂದ ಬಿದ್ದು ಕೆ.ಜೆ.ಗಿರೀಶ್ (28) ಎಂಬುವರು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.

ಮುಳಬಾಗಿಲಿನ ಗಿರೀಶ್, ನಗರದ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಜಂಬೂಸವಾರಿ ದಿಣ್ಣೆಯಲ್ಲಿ ವಾಸವಿದ್ದರು.

‘ಶುಕ್ರವಾರ ರಾತ್ರಿ ಗಿರೀಶ್ ಅವರು ಸ್ನೇಹಿತರ ಜೊತೆ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದರು. ಮೊಬೈಲ್ ಹಿಡಿದುಕೊಂಡೇ ಮನೆಯಿಂದ ಹೊರಗೆ ಬಂದು ಮಹಡಿಯಿಂದ ಹಾರಿದ್ದರು. ರಕ್ತಸಿಕ್ತವಾಗಿ ಬಿದ್ದಿದ್ದ ಅವರನ್ನು ಗಮನಿಸಿದ್ದ ಸ್ಥಳೀಯ ನಿವಾಸಿಗಳು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ಮಾರ್ಗಮಧ್ಯೆಯೇ ಅವರು ಮೃತಪಟ್ಟಿರುವುದಾಗಿ ವೈದ್ಯರು ಹೇಳಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು