ಬುಧವಾರ, ಮಾರ್ಚ್ 29, 2023
31 °C
ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹೇಳಿಕೆ

ಬಾಡಿಗೆದಾರರ ಮಾಹಿತಿ ಸಂಗ್ರಹಕ್ಕೆ ತಂತ್ರಾಂಶ: ಕಮಲ್ ಪಂತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಹೊರ ರಾಜ್ಯ ಹಾಗೂ ವಿದೇಶಗಳಿಂದ ಬಂದು ನಗರದಲ್ಲಿ ಬಾಡಿಗೆಗೆ ಮನೆ ಪಡೆಯುವವರ ಮಾಹಿತಿ ಸಂಗ್ರಹಿಸಲು ಆನ್‌ಲೈನ್‌ ತಂತ್ರಾಂಶವನ್ನು ಪೊಲೀಸ್ ಇಲಾಖೆ ಅಭಿವೃದ್ಧಿಪ‍ಡಿಸಲಿದೆ. ಇದರಿಂದ ಅನ್ಯ ಕಡೆಗಳಿಂದ ನಗರಕ್ಕೆ ಬಂದು ನೆಲೆಸಿರುವವರಿಂದ ನಡೆಯುತ್ತಿರುವ ಅಪರಾಧಗಳನ್ನು ನಿಯಂತ್ರಿಸಲು ಸಾಧ್ಯ’ ಎಂದು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ತಿಳಿಸಿದರು.

ಸುದ್ದಿಗಾರರೊಂದಿಗೆ ಬುಧವಾರ ಮಾತನಾಡಿದ ಅವರು,‘ಮನೆ ಮಾಲೀಕರು ಬಾಡಿಗೆದಾರರ ಮಾಹಿತಿಯನ್ನು ಸ್ಥಳೀಯ ಠಾಣೆಗೆ ನೀಡಬಹುದು. ಇದಕ್ಕಾಗಿ ಆನ್‌ಲೈನ್ ನೋಂದಣಿ ವ್ಯವಸ್ಥೆ ಕಲ್ಪಿಸಲಾಗುವುದು. ಇದರಿಂದ ಅಪರಾಧಗಳಲ್ಲಿ ಭಾಗಿಯಾಗುವ ವ್ಯಕ್ತಿಗಳ ಮೇಲೆ ನಿಗಾ ಇಡಬಹುದು’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು