‘ಮಣ್ಣು ಉಳಿಸಿ’ ಅಭಿಯಾನ: ಮ್ಯಾರಥಾನ್

ಬೆಂಗಳೂರು: ‘ಮಣ್ಣು ಉಳಿಸಿ’ ಅಭಿಯಾನ ಅಂಗವಾಗಿ ಸೂತ್ರ ಪಿಟ್ನೆಸ್ ವತಿಯಿಂದ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮ್ಯಾರಥಾನ್ನಲ್ಲಿ ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 6 ಗಂಟೆಗೆ ಮ್ಯಾರಾಥಾನ್ ಆರಂಭವಾಯಿತು. ಯುವಕ–ಯುವತಿಯರು ಉತ್ಸಾಹದಿಂದ ಓಟದಲ್ಲಿ ಪಾಲ್ಗೊಂಡು, ಅಭಿಯಾನಕ್ಕೆ ಕೈ ಜೋಡಿಸಿದರು.
ನಟಿ ಧನ್ಯಾ ರಾಮ್ಕುಮಾರ್ ಸಹ ಓಡಿದರು. 25 ಅಂಧರು ಸಹ ಓಟದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು. ಇವರಿಗೆ ಪದಕ ನೀಡಿ ಅಭಿನಂದಿಸಲಾಯಿತು. ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಅಶ್ವಿನಿ ಪುನೀತ್
ರಾಜ್ಕುಮಾರ್, ಮ್ಯಾರಥಾನ್ನಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.
ಓಟದಲ್ಲಿ ಪಾಲ್ಗೊಂಡಿದ್ದ ಎಲ್ಲರನ್ನೂ ಅಭಿನಂದಿಸಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಹಾಜರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.