ಸೋಲಾಪುರ: ಜೂನ್ 28ರಂದು ಜಿಲ್ಲೆಯ 4.37 ಲಕ್ಷ ಮಕ್ಕಳಿಗೆ ಒಂದೇ ಸಮಯದಲ್ಲಿ ಪೋಲಿಯೊ ಲಸಿಕೆ ನೀಡಲು ಪೋಲಿಯೊ ಲಸಿಕಾ ಅಭಿಯಾನದ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ನಿರ್ಧರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ಗಣೇಶ್ ನಿರಾಳೆ ಅಧ್ಯಕ್ಷತೆ ವಹಿಸಿದ್ದರು.

ಅಭಿಯಾನದ ಅವಧಿಯಲ್ಲಿ 5 ವರ್ಷದೊಳಗಿನ ಯಾವುದೇ ಮಗು ಪೋಲಿಯೊ ಲಸಿಕೆಯಿಂದ ವಂಚಿತವಾಗದಂತೆ ವಿಶೇಷ ಕಾಳಜಿ ವಹಿಸಬೇಕು ಹಾಗೂ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಗಣೇಶ್ ನಿರಾಳೆ ಹೇಳಿದರು.

ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ನಡೆಯಲಿದ್ದು, ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ ಎಂದು ಆರೋಗ್ಯಾಧಿಕಾರಿ ಡಾ. ಸತೀಶ ಕಪೂರವಾಡ ಮಾಹಿತಿ ನೀಡಿದರು.

ಸೋಲಾಪುರ ಜಿಲ್ಲೆಯಲ್ಲಿ ಒಟ್ಟು 4,36,572 ಐದು ವರ್ಷದೊಳಗಿನ ಮಕ್ಕಳು ಇದ್ದು, ಗ್ರಾಮೀಣ ಭಾಗದಲ್ಲಿ 5,570, ನಗರ ಪ್ರದೇಶದಲ್ಲಿ 570 ಹಾಗೂ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 373 ಲಸಿಕಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗಿದೆ. ಲಸಿಕೆ ನೀಡಲು 7,222 ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಮೇಲ್ವಿಚಾರಣೆಗಾಗಿ ವೈದ್ಯಕೀಯ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

ಸಭೆಯಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ವರ್ಷಾ ಡೋಯಿಫೋಡೆ, ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ. ರಾಖಿ ಮಾನೆ, ಎಲ್ಲಾ ತಾಲ್ಲೂಕು ಆರೋಗ್ಯಾಧಿಕಾರಿಗಳು, ಜಿಲ್ಲಾ ಮಕ್ಕಳ ಹಾಗೂ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಮಂಜಿರಿ ಕುಲಕರ್ಣಿ, ಉಪ ಶಿಕ್ಷಣಾಧಿಕಾರಿ ಪ್ರಕಾಶ ನಾಂಗರೆ, ಜಿಲ್ಲಾ ಆರೋಗ್ಯ ಮೇಲ್ವಿಚಾರಕಿಯರಾದ ಸಪ್ನಾ ಸೋನವಣೆ ಹಾಗೂ ಸಾಧನಾ ಶಿರಸಾಟ್, ಸೋಲಾಪುರ ವೈದ್ಯಕೀಯ ಮಹಾವಿದ್ಯಾಲಯದ ನಿವಾಸಿ ವೈದ್ಯಾಧಿಕಾರಿ ಡಾ. ಓಂಕಾರ ಯೆಮುಲ್, ಸಹಾಯಕ ಪ್ರಾಧ್ಯಾಪಕ ಡಾ. ತಿರುಪತಿ ಚೋರಮಲೆ ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-26-142506599

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.