ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾರಸಿ ಸೌರ ವಿದ್ಯುತ್ ಉತ್ಪಾದನೆಗೆ ಚಾಲನೆ: ಸಿ.ಎನ್‌.ಅಶ್ವತ್ಥನಾರಾಯಣ

Last Updated 10 ಅಕ್ಟೋಬರ್ 2021, 7:18 IST
ಅಕ್ಷರ ಗಾತ್ರ

ಬೆಂಗಳೂರು: ‘ಸುಸ್ಥಿರ ಅಭಿವೃದ್ಧಿ ಎಲ್ಲರ ಗುರಿಯಾಗಬೇಕು. ಈ ದಿಸೆಯಲ್ಲಿಸ್ವಯಂ ವಿದ್ಯುತ್ ಉತ್ಪಾದನೆ ಪ್ರಮುಖ ಹೆಜ್ಜೆ. ಯಾವುದೇ ಅಭಿವೃದ್ಧಿ ಕಾರ್ಯವು ಪರಿಸರಕ್ಕೆ ಧಕ್ಕೆಯಾಗದಂತೆ ಎಚ್ಚರ ವಹಿಸುವುದೂ ಮುಖ್ಯ’ ಎಂದು ಉನ್ನತ ಶಿಕ್ಷಣ ಸಚಿವ ಸಿ.ಎನ್‌.ಅಶ್ವತ್ಥನಾರಾಯಣ ತಿಳಿಸಿದರು.

‘ಬ್ರಿಗೇಡ್ ಗೇಟ್ ವೇ’ ವಸತಿ ಸಮುಚ್ಚಯದ ತಾರಸಿ ಮೇಲೆ ಅಳವಡಿಸಿರುವ 354 ಕಿಲೋವಾಟ್‌ ಸಾಮರ್ಥ್ಯದ ಸೌರ ವಿದ್ಯುತ್ ಉತ್ಪಾದನಾ ಘಟಕಕ್ಕೆ ಚಾಲನೆ ನೀಡಿ ಅವರು ಶನಿವಾರ ಮಾತನಾಡಿದರು.

‘ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ 100 ಗಿಗಾವಾಟ್‌ಗಳಷ್ಟು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಗುರಿ ಹೊಂದಿದ್ದಾರೆ. ವಿದ್ಯಾರ್ಥಿಗಳು ಸೇರಿ ಇದಕ್ಕೆ ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು. ಇದಕ್ಕೆ ಅಗತ್ಯವಿರುವ ಶಿಕ್ಷಣಕ್ಕೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಒತ್ತು ನೀಡಲಾಗಿದೆ’ ಎಂದರು.

‘ಬ್ರಿಗೇಡ್‌ ಗೇಟ್‌ ವೇ ಒಕ್ಕೂಟವು ನೀರಿನ ಮರುಬಳಕೆ, ತ್ಯಾಜ್ಯ ವಿಲೇವಾರಿ ವ್ಯವಸ್ಥೆಗಳನ್ನು ಅಳವಡಿಸಿಕೊಂಡಿದ್ದು, ಈಗ ಸರ್ಕಾರದ ನೆರವು ಬಯಸದೇ ಸ್ವಯಂ ಸೌರ ವಿದ್ಯುತ್‌ ಉತ್ಪಾದನಾ ವ್ಯವಸ್ಥೆ ಅಳವಡಿಸಿರುವುದು’ ಎಂದು ಶ್ಲಾಘಿಸಿದರು.

ಬ್ರಿಗೇಡ್ ಗೇಟ್ ವೇ ಒಕ್ಕೂಟದ ಅಧ್ಯಕ್ಷ ಮಹೇಶ್, ಬೆಸ್ಕಾಂ ಕಾರ್ಯನಿರ್ವಾಹಕ ಎಂಜಿನಿಯರ್ ರಘು, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸಿದ್ದರಾಜು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT