ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋರ್ಟ್ ಮೂಲಕ ಪರಿಹಾರ: ನಿಯಮ ಬದಲಾವಣೆ

Last Updated 27 ಜೂನ್ 2020, 19:53 IST
ಅಕ್ಷರ ಗಾತ್ರ

ಬೆಂಗಳೂರು: ಕೋರ್ಟ್ ಮೂಲಕ ಪರಿಹಾರ ಕೋರಿ ಡಿಕ್ರಿ ಪಡೆದಿರುವ ಕಕ್ಷಿದಾರರು ತಮ್ಮ ಹಣ ಪಡೆದುಕೊಳ್ಳಲು ಚೆಕ್ ನೀಡುತ್ತಿದ್ದ ಪ್ರಕ್ರಿಯೆಯನ್ನು ಹೈಕೋರ್ಟ್ ಸ್ಥಗಿತಗೊಳಿಸಿದೆ. ಈ ನಿಟ್ಟಿನಲ್ಲಿ ಹೊಸ ನಿಯಮಗಳನ್ನು ಜಾರಿ ಮಾಡಲಾಗಿದೆ.

ಈ ಕುರಿತಂತೆ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ನಿರ್ದೇಶಿಸಿದೆ.

ಮೋಟಾರು ವಾಹನ ಅಪಘಾತದಲ್ಲಿ, ಭೂಸ್ವಾಧೀನ ಪ್ರಕರಣಗಳಲ್ಲಿ ಹಾಗೂ ಕಾರ್ಮಿಕರ ಪರಿಹಾರ ಕಾಯ್ದೆ ಅಡಿ ಪರಿಹಾರ ಪಡೆಯುವ ಕಕ್ಷಿದಾರರಿಗೆ ಅನುಕೂಲವಾಗುವಂತೆ ಈ ನಿರ್ದೇಶನ ನೀಡಲಾಗಿದೆ.

‘ನ್ಯಾಯಾಂಗ ಖಾತೆಯ ಖಜಾನೆ-2 ರಲ್ಲಿ ಠೇವಣಿ ಇರಿಸಿರುವ ಪರಿಹಾರ ಹಣವನ್ನು ಪಡೆದುಕೊಳ್ಳಲು ಅನುಕೂಲ ವಾಗುವಂತೆ ಪ್ರಕ್ರಿಯೆಗಳನ್ನು ಪರಿಷ್ಕರಿಸುವ ಅಗತ್ಯವಿದೆ. ಜತೆಗೆ ಕಕ್ಷಿದಾರರಿಗೆ ತೊಂದರೆಯಾಗದಂತೆ ಸುರಕ್ಷಿತವಾಗಿ ಹಣ ಬಿಡುಗಡೆಯಾಗುವಂತೆ ಕ್ರಮ ಕೈಗೊಳ್ಳಬೇಕಿದೆ’ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT