ಭಾನುವಾರ, ಸೆಪ್ಟೆಂಬರ್ 26, 2021
21 °C

ಕಲಾವಿದರಿಗೆ ನಿವೇಶನ ಹಂಚಿಕೆ: ಸಚಿವ ಸೋಮಣ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಿವೇಶನ ಇಲ್ಲದಿರುವ ಚಲನಚಿತ್ರ ಕಲಾವಿದರು ಮತ್ತು ರಂಗಭೂಮಿ ಕಲಾವಿದರನ್ನು ಪಟ್ಟಿ ಮಾಡಿ ಅರ್ಜಿ ನೀಡಿದರೆ, ಮುಖ್ಯಮಂತ್ರಿಗಳ ಬಳಿ ಚರ್ಚಿಸಿ, ಒಂದೂವರೆ ತಿಂಗಳಲ್ಲಿ ಅವರಿಗೆ ವಸತಿ ಅಥವಾ ನಿವೇಶನ ಹಂಚಿಕೆ ಮಾಡಲಾಗುವುದು’ ಎಂದು ವಸತಿ ಸಚಿವ ವಿ.ಸೋಮಣ್ಣ ಭರವಸೆ ನೀಡಿದರು.

ವಿ.ಸೋಮಣ್ಣ ಪ್ರತಿಷ್ಠಾನವು ಕೆಂಪೇಗೌಡ ಜಯಂತಿ ಅಂಗವಾಗಿ ಗೋವಿಂದರಾಜ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿನಿಮಾ ಹಾಗೂ ರಂಗಭೂಮಿ ಕಲಾವಿದರಿಗೆ ದಿನಸಿ ಕಿಟ್ ವಿತರಿಸಿ ಅವರು ಮಾತನಾಡಿದರು.

ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್,‘ಬೆಂಗಳೂರು ನಗರ ಖ್ಯಾತಿ ಪಡೆಯಲು ಮೂಲ ಕಾರಣ ಪುರುಷರು ನಾಡಪ್ರಭು ಕೆಂಪೇಗೌಡರು. ಅವರ ಅಭಿವೃದ್ದಿಪರ ಚಿಂತನೆಗಳು ಹಾಗೂ ಯೋಜನೆಗಳನ್ನು ಜಾರಿಯಾದರೆ ಬೆಂಗಳೂರು ಇನ್ನಷ್ಟು ಅಭಿವೃದ್ದಿಯತ್ತ ಸಾಗಲಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು