ಶನಿವಾರ, ಮಾರ್ಚ್ 6, 2021
31 °C

ಉದ್ಧಟತನದ ಪ್ರತೀಕ: ಸೋಮಶೇಖರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬೆಳಗಾವಿ ಕುರಿತಾದ ಮಹಾರಾಷ್ಟ್ರ ಸರ್ಕಾರದ ಹೇಳಿಕೆ ಉದ್ಧಟತನದ ಪ್ರತೀಕ. ಗಡಿ ವಿವಾದದಲ್ಲಿ ಮಹಾಜನ ಆಯೋಗದ ತೀರ್ಪೇ ಅಂತಿಮ’ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಸೋಮಶೇಖರ್‌ ಹೇಳಿದ್ದಾರೆ.

‘ಬೆಳಗಾವಿಯಲ್ಲಿರುವ ಜನರೆಲ್ಲರೂ ಕನ್ನಡ ಮನಸ್ಸುಳ್ಳ ನಮ್ಮ ಸಹೋದರರು. ಭೌಗೋಳಿಕವಾಗಿ ಸಾಂಸ್ಕೃತಿಕ ವಾಗಿ ಬೆಳಗಾವಿ ಕನ್ನಡ ನಾಡಿನ ಅವಿಭಾಜ್ಯ ಭಾಗ. ಕನ್ನಡ ನಾಡಿನ ಅಖಂಡತೆಯ ಬಗ್ಗೆ ಅಪಸ್ವರ ಎತ್ತಿದರೆ ಕನ್ನಡಿಗರು ಸುಮ್ಮನಿರಲ್ಲ’ ಎಂದೂ ಅವರು ಎಚ್ಚರಿಕೆ ನೀಡಿದ್ದಾರೆ.

‘ಈ ಹೇಳಿಕೆಯನ್ನು ರಾಜ್ಯದ ಮುಖ್ಯಮಂತ್ರಿ ಈಗಾಗಲೇ ಗಟ್ಟಿ ಧ್ವನಿಯಲ್ಲಿ ಖಂಡಿಸಿದ್ದಾರೆ. ಈಗಾಗಲೇ ಇತ್ಯರ್ಥ ಆಗಿರುವ ವಿಷಯಗಳ ಬಗ್ಗೆ ಅನಗತ್ಯ ತಗಾದೆ ತೆಗೆದು, ಬೆಳಗಾವಿಯಲ್ಲಿ ಸೌಹಾರ್ದತೆಯಿಂದ ಸಹಬಾಳ್ವೆ ನಡೆಸುತ್ತಿರುವ, ಭಾಷೆ ಮರಾಠಿಯಾದರು ಕನ್ನಡ ಅಸ್ಮಿತೆ ಕಾಪಾಡಿಕೊಂಡು ಬಂದಿರುವವರಲ್ಲಿ ವಿಷ ಬೀಜ ಬಿತ್ತುವುದನ್ನು ನಾವು ಸಹಿಸುವುದಿಲ್ಲ’ ಎಂದೂ ಸೋಮಶೇಖರ್‌ ಹೇಳಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು