ಸೋಮವಾರ, ಆಗಸ್ಟ್ 2, 2021
20 °C

ರಾಜ್ಯಸಭೆ ಜಂಟಿ ಕಾರ್ಯದರ್ಶಿಯಾಗಿ ಸೋಮಶೇಖರ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಜ್ಯಸಭೆಯ ಜಂಟಿ ಕಾರ್ಯದರ್ಶಿಯಾಗಿ ಕನ್ನಡಿಗ ಅಧಿಕಾರಿ ಡಾ.ಕೆ.ಎಸ್‌. ಸೋಮಶೇಖರ್ ಅವರನ್ನು ನೇಮಕ ಮಾಡಲಾಗಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರದವರಾದ ಇವರು, ಈ ಹುದ್ದೆಗೆ ಏರಿದ ಮೊದಲ ಕನ್ನಡಿಗ ಅಧಿಕಾರಿ.

ಈ ಮೊದಲು ರಾಜ್ಯಸಭೆಯ ನಿರ್ದೇಶಕರಾಗಿದ್ದರು. ಈ ಹಿಂದೆ ಕೇಂದ್ರದ ರೈಲ್ವೆ ಹಾಗೂ ಜವಳಿ ಸಚಿವರ ಆಪ್ತ ಕಾರ್ಯದರ್ಶಿಯಾಗಿದ್ದರು. ರಾಜ್ಯ ಸೇವೆಗೆ ನಿಯೋಜನೆ ಮೇಲೆ ಬಂದಿದ್ದರು.

ಪ್ರಸ್ತುತ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎಸ್‌.ಆರ್‌. ವಿಶ್ವನಾಥ್‌ ಅವರ ಆ‍ಪ್ತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಂಟಿ ಕಾರ್ಯದರ್ಶಿಯಾಗಿ ಮಂಗಳವಾರ ಅಧಿಕಾರ ಸ್ವೀಕರಿಸಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು