ಸೋಮವಾರ, ಸೆಪ್ಟೆಂಬರ್ 20, 2021
24 °C

ಲಸಿಕೆ ಪಡೆದ ನಂತರ ಮಗ ಸಾವು: ಪೋಷಕರ ಆರೋಪ‍

ಪ‍್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಣಾವರ: ಕೋವಿಡ್‌ ಲಸಿಕೆ ಪಡೆದ ಬಳಿಕ ತಮ್ಮ ಮಗ ವಸಂತ ನಾಯಕ್‌ (35) ಮೃತಪಟ್ಟಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.

ಸಮೀಪದ ಬೋರನಕೊಪ್ಪಲು ಗ್ರಾಮದ ವಸಂತ ಸೆ. 4 ರಂದು ಬೆಂಗಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೋವಿಡ್-19 ಲಸಿಕೆ ಪಡೆದು ಗ್ರಾಮಕ್ಕೆ ಮರಳಿದ್ದರು ಸೋಮ
ವಾರ ಅಸ್ವಸ್ಥಗೊಂಡಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಹಿಮ್ಸ್ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟರು.

‘ಮಗನ ಸಾವಿಗೆ ಕೋವಿಡ್-19 ಲಸಿಕೆ ಕಾರಣ. ಯಾವುದೇ ಕಾಯಿಲೆಗಳಿರಲಿಲ್ಲ. ಆ ಬಗ್ಗೆ ತನಿಖೆಯಾಗಬೇಕು ಹಾಗೂ ಪರಿಹಾರ ನೀಡಬೇಕು’ ಎಂದು ಪೋಷಕರು ಒತ್ತಾಯಿಸಿದ್ದಾರೆ. 

‘ಲಸಿಕೆಗೂ ಸಾವಿಗೂ ಯಾವುದೇ ಸಂಬಂಧವಿಲ್ಲ. ಮರಣೋತ್ತರ ಪರೀಕ್ಷೆಯ ನಂತರ ಕಾರಣ ತಿಳಿಯಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವ್ಯಾಕ್ಸಿನ್ ಪಡೆದು ಗ್ರಾಮಕ್ಕೆ  ಬಂದಿದ್ದಾರೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕೆ.ಎಂ.ಸತೀಶ್ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು