ಶನಿವಾರ, ಫೆಬ್ರವರಿ 29, 2020
19 °C

ಸದ್ಯದಲ್ಲೇ ಆರು ಸ್ಥಾನ ಭರ್ತಿ: ವಿಜಯೇಂದ್ರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮೈಸೂರು: ‘ಬಾಕಿ ಉಳಿದಿರುವ ಆರು ಸಚಿವ ಸ್ಥಾನಗಳನ್ನು ಸದ್ಯದಲ್ಲಿ ಭರ್ತಿ ಮಾಡಲಿದ್ದು, ಪ್ರಾದೇಶಿಕ ಅಸಮತೋಲನ ಹೋಗಲಾಡಿಸಲು ಪ್ರಯತ್ನಿಸಲಾಗುವುದು’ ಎಂದು ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ.ವಿಜಯೇಂದ್ರ ಭಾನುವಾರ ಇಲ್ಲಿ ತಿಳಿಸಿದರು.

‘ಮುಖ್ಯಮಂತ್ರಿ ಯಡಿಯೂರಪ್ಪ ಕೊಟ್ಟ ಮಾತು ತಪ್ಪುವುದಿಲ್ಲ. ಹಳೇ ಮೈಸೂರು ಭಾಗ ಹಾಗೂ ಕರಾವಳಿ ಪ್ರದೇಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಮುಂದಿನ ದಿನಗಳಲ್ಲಿ ಎಚ್‌.ವಿಶ್ವನಾಥ್‌ ಹಾಗೂ ಎಂ.ಟಿ.ಬಿ.ನಾಗರಾಜ್‌ ಅವರಿಗೂ ಉತ್ತಮ ಸ್ಥಾನಮಾನ ಸಿಗಲಿದೆ’ ಎಂದು ನುಡಿದರು.

‘ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರದಲ್ಲಿ ಏನೋ ಗೊಂದಲ ಸೃಷ್ಟಿಯಾಗುತ್ತದೆ ಎಂದು ವಿರೋಧ ಪಕ್ಷದವರು ಹಗಲು ಕನಸು ಕಾಣುತ್ತಿದ್ದರು. ಆದರೆ, ಎಲ್ಲವೂ ಸುಸೂತ್ರವಾಗಿ ನಡೆದಿದೆ’ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು