ಬೆಂಗಳೂರು: ರಾಜ್ಯದ ಭೂ ನ್ಯಾಯಮಂಡಳಿಯಲ್ಲಿರುವ ಅರೆ ನ್ಯಾಯಿಕ ವಿಚಾರಣೆ ವ್ಯಾಪ್ತಿಗೆ ಒಳಪಟ್ಟ ಪ್ರಕರಣಗಳ ತ್ವರಿತ ವಿಲೇವಾರಿ ಮಾಡಲು ಪ್ರಮಾಣಿತ ಕಾರ್ಯಚರಣೆ ವಿಧಾನವೊಂದನ್ನು (ಎಸ್ಒಪಿ) ಸಿದ್ಧಪಡಿಸಲು ಕಂದಾಯ ಇಲಾಖೆ ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಭೂ ನ್ಯಾಯಮಂಡಳಿ ಆದೇಶ ರದ್ದು ಕೋರಿ ಕೆ.ವೀರಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ, ನ್ಯಾಯಮೂರ್ತಿ ಕೆ.ರಾಜೇಶ್ ರೈ ಅವರಿದ್ದ ಏಕಸದಸ್ಯ ನ್ಯಾಯಪೀಠಕ್ಕೆ ಈ ವಿಷಯ ತಿಳಿಸಿದ್ದಾರೆ.

‘ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಕುಲಸಚಿವ ಸಂತೋಷ್ ಕಾಮಗೌಡ, ಕಂದಾಯ ಇಲಾಖೆ ಭೂಮಿ ಉಸ್ತುವಾರಿ ಕೋಶದ ವಿಶೇಷ ಜಿಲ್ಲಾಧಿಕಾರಿ ಆರ್.ಜಿ.ಚಂದ್ರಶೇಖರ್ ಮತ್ತು ತಹಶೀಲ್ದಾರ್ ಬಿ.ಎನ್.ಸ್ವಾಮಿ ಸಮಿತಿಯ ಸದಸ್ಯರಾಗಿದ್ದಾರೆ’ ಎಂದು ವಿವರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.