ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಗೋಡೆಗಳ ಮೇಲೆ ‘Sorry’ ಬರಹ: ಸಿಸಿಟಿವಿಯಲ್ಲಿ ಇಬ್ಬರ ಗುರುತು ಪತ್ತೆ

ಅಕ್ಷರ ಗಾತ್ರ

ಬೆಂಗಳೂರು: ನಗರದ ಸುಂಕದಕಟ್ಟೆಯ ಶಾಂತಿಧಾಮ ವಿದ್ಯಾಸಂಸ್ಥೆ ಶಾಲೆಯ ಮೆಟ್ಟಿಲು, ಗೋಡೆ ಹಾಗೂ ರಸ್ತೆ ಮೇಲೆ ‘ಸಾರಿ (ಕ್ಷಮಿಸಿ)’ ಎಂಬುದಾಗಿ ಬರೆಯಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳ ಗುರುತು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಇಬ್ಬರು ಯುವಕರು ಬೈಕ್‌ನಲ್ಲಿ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅವರಿಗಾಗಿ ಹುಡುಕಾಟ ನಡೆಸುತ್ತಿದ್ದು, ಅದಷ್ಟು ಬೇಗ ಆರೋಪಿಗಳನ್ನು ಬಂಧಿಸಲಾಗುವುದು’ ಎಂದು ಬೆಂಗಳೂರು ಪಶ್ಚಿಮ ವಲಯದ ಡಿಸಿಪಿ ಡಾ. ಸಂಜೀವ್ ಪಾಟೀಲ್‌ ತಿಳಿಸಿದ್ದಾರೆ.

‘ಶಾಲೆ ಬಳಿ ತಡರಾತ್ರಿ ಬಂದು ಹೋಗಿದ್ದ ಕಿಡಿಗೇಡಿಗಳು, ‘ಸಾರಿ’ ಎಂಬುದಾಗಿ ಬರೆದಿದ್ದಾರೆ. ನಸುಕಿನಲ್ಲಿ ವಾಯುವಿಹಾರಕ್ಕೆ ಹೊರಟಿದ್ದ ಸಾರ್ವಜನಿಕರು, ಬರಹಗಳನ್ನು ನೋಡಿ ಶಾಲೆ ಶಿಕ್ಷಕರು ಹಾಗೂ ಠಾಣೆಗೆ ಮಾಹಿತಿ ನೀಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದರು.

‘ಸಾರಿ’ ಎಂಬುದನ್ನು 100ಕ್ಕೂ ಹೆಚ್ಚು ಬಾರಿ ಇಂಗ್ಲಿಷ್‌ನಲ್ಲಿ ದೊಡ್ಡ ಅಕ್ಷರಗಳಲ್ಲಿ ಬರೆಯಲಾಗಿದೆ. ಜೊತೆಗೆ, ಪ್ರೀತಿಯ ಸಂಕೇತವಾದ ಹೃದಯದ ಚಿತ್ರವನ್ನೂ ಕೆಲವೆಡೆ ಬಿಡಿಸಲಾಗಿದೆ. ಯಾರೋ ಪ್ರೇಮಿ ಈ ರೀತಿ ಮಾಡಿರುವ ಅನುಮಾನವಿದೆ. ಆತನ ಪತ್ತೆಗಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಪರಿಶೀಲನೆ ನಡೆಸಲಾಗುತ್ತಿದೆ’ ಎಂದೂ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT