ಶಿಸ್ತು ಕ್ರಮ ಕೈಗೊಳ್ಳಿ: ಬಿಳಿಮಲೆ
ಕನ್ನಡವನ್ನು ಕಡೆಗಣಿಸಿರುವ ನೈರುತ್ಯ ರೈಲ್ವೆ ಬೆಂಗಳೂರು ವಿಭಾಗದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಪತ್ರ ಬರೆದಿದ್ದಾರೆ. ‘ಕನ್ನಡದಲ್ಲಿ ಬರೆಯುವ ಅವಕಾಶವನ್ನು ನಿರಾಕರಿಸುವ ಮೂಲಕ ಕನ್ನಡಿಗರ ಭಾವನೆಗಳಿಗೆ ತೀವ್ರ ಘಾಸಿಯನ್ನು ಉಂಟು ಮಾಡಿದ್ದಾರೆ. ಹುಬ್ಬಳ್ಳಿ ಮೈಸೂರು ವಿಭಾಗದಲ್ಲಿ ಕನ್ನಡದಲ್ಲಿ ಪರೀಕ್ಷೆ ಬರೆಯಬಹುದಾದರೆ ಬೆಂಗಳೂರು ವಿಭಾಗದಲ್ಲಿ ಯಾಕೆ ಸಾಧ್ಯವಾಗಿಲ್ಲ ಎಂಬುದರ ಬಗ್ಗೆಯೂ ತನಿಖೆ ಮಾಡಬೇಕು. 15 ದಿನಗಳ ಹಿಂದೆ ಕನ್ನಡಕ್ಕೆ ಅವಕಾಶ ನೀಡದೇ ನಡೆಸಿದ್ದ ಪರೀಕ್ಷೆಯನ್ನು ರದ್ದು ಮಾಡಬೇಕು. ಕನ್ನಡ ಭಾಷೆಗೆ ಅವಕಾಶ ನೀಡಿ ಮರು ಪರೀಕ್ಷೆ ನಡೆಸುವ ಮೂಲಕ ಕನ್ನಡಿಗರಿಗೆ ನ್ಯಾಯ ಒದಗಿಸಿಕೊಡಬೇಕು’ ಎಂದು ಪತ್ರದಲ್ಲಿ ಆಗ್ರಹಿಸಿದ್ದಾರೆ.