ಶನಿವಾರ, ಜುಲೈ 31, 2021
25 °C

ಎಸ್‌ಪಿ ರಸ್ತೆಯಲ್ಲಿ ವ್ಯಾಪಾರಕ್ಕೆ ಅವಕಾಶ ನೀಡಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನಗರದ ಪ್ರಮುಖ ಎಲೆಕ್ಟ್ರಾನಿಕ್ ಮಾರುಕಟ್ಟೆಯಾದ ಎಸ್‌ಪಿ ರಸ್ತೆಯನ್ನು ತೆರೆಯಲು ಅನುಮತಿ ಕೊಟ್ಟು, ವ್ಯಾಪಾರ–ವಹಿವಾಟು ನಡೆಸಲು ಅವಕಾಶ ನೀಡಬೇಕು’ ಎಂದು ಬೆಂಗಳೂರು ಎಲೆಕ್ಟ್ರಾನಿಕ್‌ ಉತ್ಪನ್ನಗಳ ವ್ಯಾಪಾರಿಗಳ ಸಂಘದ ಉಪಾಧ್ಯಕ್ಷ ಲಲಿತ್‌ ಡಕಲಿಯಾ ಒತ್ತಾಯಿಸಿದ್ದಾರೆ. 

‘ಈ ಪ್ರದೇಶದಲ್ಲಿ ದಿನಕ್ಕೆ ಕೋಟ್ಯಂತರ ರೂಪಾಯಿ ವಹಿವಾಟು ನಡೆಯಲಿದ್ದು, ಸರ್ಕಾರಕ್ಕೆ ಹೆಚ್ಚಿನ ತೆರಿಗೆ ಪಾವತಿಸಲಾಗುತ್ತದೆ. ಈಗ ವ್ಯಾಪಾರವಿಲ್ಲದೆ, ಎಲೆಕ್ಟ್ರಾನಿಕ್‌ ಯಂತ್ರಗಳ ಬಿಡಿಭಾಗಗಳು ಹಾಳಾಗುತ್ತಿವೆ’ ಎಂದು ಅವರು ಹೇಳಿದ್ದಾರೆ. 

ಸಂಘದ ಅಧ್ಯಕ್ಷ ಮಹಾವೀರ್ ಪಗರಿಯಾ, ‘ಕೋವಿಡ್‌–19 ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ, ನಿರ್ದಿಷ್ಟ ಸಮಯದವರೆಗೆ ಮಾತ್ರ ವ್ಯಾಪಾರ–ವಹಿವಾಟು ನಡೆಸುತ್ತೇವೆ. ವ್ಯಾಪಾರಕ್ಕೆ ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.