ಸೋಮವಾರ, ಮಾರ್ಚ್ 20, 2023
24 °C

ಲಲಿತಮ್ಮ, ನಾಗೇಶ್‌ಗೆ ‘ಎಸ್.ಪಿ. ವರದರಾಜು ಪ್ರಶಸ್ತಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ ರಾಜ್‌ಕುಮಾರ್ ಅವರ ಸೋದರ ಎಸ್.ಪಿ. ವರದರಾಜು ಹೆಸರಿನಲ್ಲಿ ನೀಡಲಾಗುತ್ತಿರುವ ‘ಎಸ್.ಪಿ. ವರದರಾಜು ಪ್ರಶಸ್ತಿ’ಗೆ ಈ ಬಾರಿ ರಂಗಭೂಮಿ ಕ್ಷೇತ್ರದಲ್ಲಿ ಕಲಾವಿದೆ ಡಿ. ಲಲಿತಮ್ಮ ಮತ್ತು ಚಲನಚಿತ್ರ ಕ್ಷೇತ್ರದಲ್ಲಿ ಕಲಾವಿದ ಬೆಂಗಳೂರು ನಾಗೇಶ್‌ ಆಯ್ಕೆಯಾಗಿದ್ದಾರೆ.

ವರದರಾಜು ಆತ್ಮೀಯರ ಬಳಗವು ರಂಗಭೂಮಿ ಹಾಗೂ ಸಿನಿಮಾ ಕ್ಷೇತ್ರದ ಸಾಧಕರಿಗೆ ಪ್ರತಿವರ್ಷ ಈ ಪ್ರಶಸ್ತಿ ನೀಡುತ್ತಿದೆ. ಡಿ. ಲಲಿತಮ್ಮ ಅವರು 8 ವರ್ಷದ ಬಾಲಕಿಯಾಗಿದ್ದಾಗಲೇ ರಂಗಭೂಮಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ಸಮಾಜ ಸೇವೆಯಲ್ಲೂ ಸಕ್ರಿಯ ರಾಗಿದ್ದಾರೆ. ಬೆಂಗಳೂರು ನಾಗೇಶ್ ಅವರು 250ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಡಾ. ರಾಜ್‌ಕುಮಾರ್‌ ಅವರ ಜೊತೆ 22 ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭವು ಫೆ.8ರಂದು ನಡೆಯಲಿದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.