ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸ್ಪಾ ಮೇಲೆ ದಾಳಿ: 44 ಯುವತಿಯರ ರಕ್ಷಣೆ

Published 7 ಜನವರಿ 2024, 20:49 IST
Last Updated 7 ಜನವರಿ 2024, 20:49 IST
ಅಕ್ಷರ ಗಾತ್ರ

ಬೆಂಗಳೂರು: ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯ ಓಲ್ಡ್ ಮದ್ರಾಸ್‌ ರಸ್ತೆಯಲ್ಲಿರುವ ನಿರ್ವಾಣ ಸ್ಪಾದ ಮೇಲೆ ನಗರ ಕೇಂದ್ರ ವಿಭಾಗದ ಪೊಲೀಸರು, ದಾಳಿ ನಡೆಸಿ, 44 ಮಹಿಳೆಯರನ್ನು ರಕ್ಷಿಸಿದ್ಧಾರೆ.

ಸ್ಪಾದಲ್ಲಿ ಅಕ್ರಮ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇರೆಗೆ ಆರೋಪಿ ಅನಿಲ್‌ ಎಂಬಾತನನ್ನು ಬಂಧಿಸಲಾಗಿದೆ. 34 ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ಹೇಳಿವೆ.

ಹೊರ ರಾಜ್ಯ ಹಾಗೂ ವಿದೇಶದ ಯುವತಿಯರನ್ನು ಕರೆಸಿ ದಂಧೆ ನಡೆಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ದಾಳಿ ನಡೆಸಲಾಗಿದೆ. ಬಹುಮಹಡಿ‌ ಕಟ್ಟಡದ 1 ಮತ್ತು 6ನೇ ಮಹಡಿಯಲ್ಲಿ ಸ್ಪಾ ನಡೆಯುತ್ತಿತ್ತು. ದಾಳಿ ವೇಳೆ ಅಕ್ರಮ ಚಟುವಟಿಕೆ ನಡೆಯುತ್ತಿರುವುದು ಪತ್ತೆಯಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಮಹದೇವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT