ಭಾನುವಾರ, ಜನವರಿ 26, 2020
21 °C

ಡೆಹ್ರಾಡೂನ್‌ಗೆ ಸಭಾಧ್ಯಕ್ಷ ಕಾಗೇರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Vishweshwar Hegde Kageri

ಬೆಂಗಳೂರು: ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ನಡೆಯಲಿರುವ ಅಖಿಲ ಭಾರತ ಶಾಸಕಾಂಗ ಸಂಸ್ಥೆಗಳ ಸಮ್ಮೇಳನದಲ್ಲಿ ಕರ್ನಾಟಕ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪಾಲ್ಗೊಳ್ಳಲಿದ್ದಾರೆ.

ಇದೇ 18 ಮತ್ತು 19ರಂದು ಸಮ್ಮೇಳನ ನಡೆಯಲಿದೆ. ಸಂವಿಧಾನದ 10ನೇ ಪರಿಚ್ಛೇದ (ಪಕ್ಷಾಂತರ ನಿಷೇಧ ಹಾಗೂ ಶಾಸಕರ ಅನರ್ಹತೆ) ಮತ್ತು ಸಭಾಧ್ಯಕ್ಷರ ಪಾತ್ರ, ಸಂಸದೀಯ ಪ್ರಜಾಪ್ರಭುತ್ವದ ಸಬಲೀಕರಣ ಕುರಿತ ಗೋಷ್ಠಿಗಳಲ್ಲಿ ಕಾಗೇರಿ ಭಾಗಿಯಾಗಲಿದ್ದಾರೆ.

ದೇಶದ ಎಲ್ಲ ರಾಜ್ಯಗಳ ವಿಧಾನಸಭಾಧ್ಯಕ್ಷರು, ವಿಧಾನಸಭೆಯ ಕಾರ್ಯದರ್ಶಿಗಳು ಇದರಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕದ ವಿಧಾನಸಭೆ ಕಾರ್ಯದರ್ಶಿ ಎಂ.ಕೆ. ವಿಶಾಲಾಕ್ಷಿ ಅವರೂ ಪಾಲ್ಗೊಳ್ಳಲಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು