ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಮಾಅತೆ ಇಸ್ಲಾಮೀ ಹಿಂದ್‌ನ ರಾಜ್ಯ ಘಟಕದ ಕಾರ್ಯದರ್ಶಿ ಮೌಲಾನಾ ವಹೀದುದ್ದೀನ್ ಖಾನ್ ಉಮರಿ, ‘ಸಮಾಜದಲ್ಲಿರುವ ಪರಸ್ಪರ ಅಪನಂಬಿಕೆ, ದ್ವೇಷ, ಪೂರ್ವಗ್ರಹಗಳನ್ನು ಹೋಗಲಾಡಿಸಿ, ಶಾಂತಿ, ಸೌಹಾರ್ದ ಮತ್ತು ಮಾನವೀಯತೆಯನ್ನು ಬೆಳೆಸುವುದು ಈ ಅಭಿಯಾನದ ಉದ್ದೇಶವಾಗಿದೆ. ಪ್ರವಾದಿ ಮಹಮ್ಮದ್ ಅವರ ವ್ಯಕ್ತಿತ್ವ, ಸಂದೇಶ ಮತ್ತು ಬೋಧನೆಗಳು ಸರ್ವಕಾಲಕ್ಕೂ ಪ್ರಸ್ತುತವಾಗಿದ್ದು, ಇವುಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಮೂಲಕ ಜಾಗೃತಿ ಮೂಡಿಸಲಾಗುತ್ತದೆ’ ಎಂದು ವಿವರಿಸಿದರು.