ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಟಿಐ ಕಾರ್ಯಕರ್ತನಿಗೆ 6 ತಿಂಗಳ ಸಜೆ

ಹನುಮೇಗೌಡ ವಿರುದ್ಧ ಬಿ.ಜೆಪುಟ್ಟಸ್ವಾಮಿ ದಾಖಲಿಸಿದ್ದ ಪ್ರಕರಣ
Last Updated 6 ನವೆಂಬರ್ 2019, 21:45 IST
ಅಕ್ಷರ ಗಾತ್ರ

ಬೆಂಗಳೂರು: ಮಾನನಷ್ಟ ಮೊಕದ್ದಮೆಯಲ್ಲಿ ಆರೋಪಿಯಾಗಿದ್ದ ಮಾಹಿತಿ ಹಕ್ಕು ಕಾರ್ಯಕರ್ತ ಹನುಮೇಗೌಡ ಅವರಿಗೆ ಜನಪ್ರತಿನಿಧಿಗಳ ನ್ಯಾಯಾಲಯ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ.

‘ವಿಶ್ವ ಗಾಣಿಗ ಸಮುದಾಯ ಟ್ರಸ್ಟ್‌ಗೆ ಕಾನೂನು ಬಾಹಿರವಾಗಿ ಸರ್ಕಾರದ ವತಿಯಿಂದ 8 ಎಕರೆ ಜಮೀನು ಪಡೆಯಲಾಗಿದೆ’ ಎಂದು ಹನುಮೇಗೌಡ ಕಾನೂನು ಸಮರ ನಡೆಸಿದ್ದರು. ಈ ದೂರನ್ನು ಆಕ್ಷೇಪಿಸಿ ಟ್ರಸ್ಟ್‌ ಅಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು, ಹನುಮೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ’ದ ನ್ಯಾಯಾಧೀಶ ರಾಮಚಂದ್ರ ಡಿ.ಹುದ್ದಾರ ಅವರು ಬುಧವಾರ ಪ್ರಕಟಿಸಿದರು.

ಆರೋಪ ಸಾಬೀತಾದ ಕಾರಣ ಹನುಮೇಗೌಡ ಅವರಿಗೆ ಆರು ತಿಂಗಳ ಜೈಲು ಶಿಕ್ಷೆ ಮತ್ತು ₹ 25 ಸಾವಿರ ದಂಡ ವಿಧಿಸಲಾಗಿದೆ. ದಂಡ ಕಟ್ಟಲು ತಪ್ಪಿದಲ್ಲಿ ಹೆಚ್ಚುವರಿ ಎರಡು ತಿಂಗಳ ಜೈಲು ಶಿಕ್ಷೆ ಮತ್ತು ₹ 10 ಸಾವಿರ ಭದ್ರತೆ ನೀಡಲು ಆದೇಶಿಸಲಾಗಿದೆ.

ಪ್ರಕರಣ: ‘ಗಾಣಿಗ ಜನಾಂಗದ ಗುರುಪೀಠಕ್ಕೆ 2011ರ ಫೆಬ್ರುವರಿಯಲ್ಲಿ ಬಜೆಟ್‌ನಲ್ಲಿ ₹ 5 ಕೋಟಿ ಮೀಸಲು ಇರಿಸಲಾಗಿತ್ತು. ಅಂತೆಯೇ ಬೆಂಗಳೂರು ಉತ್ತರ ತಾಲ್ಲೂಕಿನ ದಾಸನಪುರ ಹೋಬಳಿಯ ನಗರೂರು ಗ್ರಾಮದ ಸರ್ವೇ ನಂಬರ್ 112ರಲ್ಲಿ ಗೋಮಾಳದ ಎಂಟು ಎಕರೆ ಜಮೀನನ್ನು ವಿಶ್ವ ಗಾಣಿಗ ಸಮುದಾಯ ಟ್ರಸ್ಟ್ ಹೆಸರಿಗೆ ನೋಂದಣಿ ಮಾಡಿಕೊಡಲಾಗಿದೆ. ಈ ಟ್ರಸ್ಟ್‌ಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಆಗಿದ್ದ ಬಿ.ಜೆ ಪುಟ್ಟಸ್ವಾಮಿ ಅಧ್ಯಕ್ಷರಾಗಿದ್ದರು. ಇವರು ತಮ್ಮ ಅಧಿಕಾರ ಬಳಸಿ ಈ ಜಮೀನು ಮಂಜೂರು ಮಾಡಿಸಿಕೊಂಡಿದ್ದಾರೆ’ ಎಂದು ಹನುಮೇಗೌಡ ಆರೋಪಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT