ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶೇಷ ಮೇಳ: 80 ಸಾವಿರ ಮಂದಿಗೆ ಲಸಿಕೆ

Last Updated 22 ಅಕ್ಟೋಬರ್ 2021, 18:28 IST
ಅಕ್ಷರ ಗಾತ್ರ

ಬೆಂಗಳೂರು: ಇದುವರೆಗೆ ಕೋವಿಡ್‌ ಲಸಿಕೆಯ ಒಂದು ಡೋಸನ್ನೂ ಪಡೆಯದವರನ್ನು ಪತ್ತೆ ಹಚ್ಚಿ ಲಸಿಕೆ ಹಾಕಿಸಲು ಬಿಬಿಎಂಪಿಯು ಶುಕ್ರವಾರ ಹಮ್ಮಿಕೊಂಡಿದ್ದ ವಿಶೇಷ ಮೇಳದಲ್ಲಿ ಒಟ್ಟು 80 ಸಾವಿರ ಮಂದಿಗೆ ಲಸಿಕೆ ನೀಡಲಾಗಿದೆ.

ಬಿಬಿಎಂಪಿಯು 4.80 ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿಯನ್ನು ಹೊಂದಿತ್ತು. ಆದರೆ, ಕೋವಿಡ್‌ ಲಸಿಕೆ ಪಡೆಯುವ ಅರ್ಹತೆ ಹೊಂದಿದವರಲ್ಲಿ ಈಗಾಗಲೇ ಶೇ 86ರಷ್ಟು ಮಂದಿ ಮೊದಲ ಡೋಸ್‌ ಹಾಗೂ ಶೇ 52ರಷ್ಟು ಮಂದಿ ಎರಡನೇ ಡೋಸ್‌ ಪಡೆದಿದ್ದರು. ಹಾಗಾಗಿ ವಿಶೇಷ ಮೇಳದಲ್ಲಿ ಲಸಿಕೆ ಪಡೆದವರ ಸಂಖ್ಯೆ 80ಸಾವಿರಕ್ಕೆ ಸೀಮಿತವಾಗಿದೆ ಎಂದು ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ವಿಭಾಗದ ಮೂಲಗಳು ತಿಳಿಸಿವೆ.

‘ಅರ್ಹತೆ ಹೊಂದಿರುವ ಎಲ್ಲರಿಗೂ ಲಸಿಕೆ ಲಭ್ಯವಾಗಬೇಕು ಎಂಬ ಕಾರಣಕ್ಕೆ ವಿಶೇಷ ಮೇಳ ಹಮ್ಮಿಕೊಳ್ಳಲಾಗಿತ್ತು ನಗರದಾದ್ಯಂತ ಅಲ್ಲಲ್ಲಿ ಲಸಿಕೆ ಕೇಂದ್ರಗಳನ್ನು ಹಾಗೂ ಸಂಚಾರ ಶಿಬಿರಗಳನ್ನು ಆಯೋಜಿಸಲಾಗಿತ್ತು. ಲಸಿಕೆ ಪಡೆಯುವಂತೆ ಜಾಗೃತಿ ಮೂಡಿಸಲು ಮನೆ ಮನೆಗೆ ತೆರಳಿ ಅಭಿಯಾನ ನಡೆಸಲಾಗುತ್ತಿದೆ. ಲಸಿಕೆ ಕಾರ್ಯಕ್ರಮ ಮುಂದುವರಿಯಲಿದೆ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಸಾರ್ವಜನಿಕ ಆರೋಗ್ಯ) ಕೆ.ವಿ.ತ್ರಿಲೋಕಚಂದ್ರ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT