ಸೋಮವಾರ, ಮೇ 16, 2022
30 °C

ಆಟಿಕೆ ಮಾರುವ ಮಕ್ಕಳ ಬಗ್ಗೆ ವಿಶೇಷ ವಿಚಾರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದ ವಿವಿಧ ಜಂಕ್ಷನ್‌ಗಳಲ್ಲಿ ಆಟಿಕೆಗಳು, ಹೂವುಗಳನ್ನು ಮಾರಾಟ ಮಾಡುವ ಮಕ್ಕಳ ಕುರಿತು ವಿಶೇಷ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧರಿಸಿದೆ.

‘ಈ ಕುರಿತು ಫೆ.18ರಂದು ವಿಶೇಷ ವಿಚಾರಣೆ ನಡೆಯಲಿದ್ದು, ಸಂಬಂಧಿಸಿದ ಎಲ್ಲರೂ ಭಾಗವಹಿಸಬೇಕು’ ಎಂದು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.

‘ಸಂಬಂಧಪಟ್ಟ ಎಲ್ಲ ಇಲಾಖೆಗಳ ಸಹಕಾರ ಇಲ್ಲದೆ ಈ ರೀತಿಯ ಮಕ್ಕಳ ಬಗ್ಗೆ ಸರ್ವೆ ನಡೆಸುವುದು ಕಷ್ಟವಾಗಲಿದೆ. ಮಾಹಿತಿ ಸಂಗ್ರಹಿಸುವ ತಂಡಗಳಿಗೆ ತರಬೇತಿ ನೀಡಲಾಗಿದೆ. ಜನವರಿ 19ರಂದು ನಡೆದ ತರಬೇತಿಗೆ ಅನೇಕ ಇಲಾಖೆ ಅಧಿಕಾರಿಗಳು ಮತ್ತು ಎನ್‌ಜಿಒ ಪ್ರತಿನಿಧಿಗಳು ಗೈರಾಗಿದ್ದರು’ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಮಾಹಿತಿ ನೀಡಿತು.

ನಗರದ ಬೀದಿ ಬೀದಿಗಳಲ್ಲಿ ಆಟಿಕೆಗಳನ್ನು ಮಾರಾಟ ಮಾಡಲು ಮಕ್ಕಳನ್ನು ಒತ್ತಾಯಪೂರ್ವಕವಾಗಿ ನಿಲ್ಲಿಸಲಾಗುತ್ತಿದೆ ಎಂದು ಆರೋಪಿಸಿ ಲೆಟ್ಜ್‌ಕಿಟ್‌ ಫೌಂಡೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು